ಬಂಟ್ವಾಳ: ಬಿಜೆಪಿಯು ಮಂಗಳೂರಿನ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಬೃಹತ್ ಸಮಾವೇಶವನ್ನು ಆಯೋಜಿಸಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸೆ.2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಪಣಂಬೂರುನಲ್ಲಿರುವ “ನವ ಮಂಗಳೂರು ಬಂದರು ಪ್ರಾಧಿಕಾರದ” ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಎನ್ ಎಂ ಪಿ ಟಿ ಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಬಂಗ್ರ ಕೂಳೂರಿನ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದೇ ವೇಳೆ ನಗರದ ಹೊರವಲಯ ಕೂಳೂರಿನಲ್ಲಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಈ ಮೂಲಕ ಬಿಜೆಪಿ ಕಾರ್ಯಕರ್ತರು, ಹಿಂದೂ ಕಾರ್ಯಕರ್ತರಿಗೆ ಹೊಸ ಹುರುಪು ನೀಡಲು ಬಿಜೆಪಿ ಮುಂದಾಗಿದೆ. ಜೂನ್ ತಿಂಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಕರ್ನಾಟಕ್ಕೆ ಆಗಮಿಸಿದ್ದರು. ಬೆಂಗಳೂರಿಗೆ ಆಗಮಿಸಿದ್ದ ಮೋದಿ, ಮೈಸೂರಿನಲ್ಲಿ ಯೋಗದಿನಾಚರಣೆ ಆಚರಿಸಿ ದೆಹಲಿಗೆ ಹಿಂತಿರುಗಿದ್ದರು.ಪ್ರಧಾನಿ ಮೋದಿ ಕೇರಳದ ಕೊಚ್ಚಿಗೆ ಭೇಟಿ ನೀಡಿ, ಅಲ್ಲಿಂದ ಮಂಗಳೂರಿಗೆ ಬರಲಿದ್ದಾರೆ.
ಪಣಂಬೂರುನಲ್ಲಿರುವ “ನವ ಮಂಗಳೂರು ಬಂದರು ಪ್ರಾಧಿಕಾರದ” ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಎನ್ ಎಂ ಪಿ ಟಿ ಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಬಂಗ್ರ ಕೂಳೂರಿನ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ ಕೇರಳದ ಕೊಚ್ಚಿಗೆ ಭೇಟಿ ನೀಡಿ, ಅಲ್ಲಿಂದ ಮಂಗಳೂರಿಗೆ ಬರಲಿದ್ದಾರೆ.