ಮಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿ ನಿಲಯಗಳು ಮಾತ್ರ) ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭರ್ಥಿಗಳು ವೆಬ್ಸೈಟ್:https://shp.karnataka.gov.in ಮೂಲಕ 2022ರ ಸೆಪ್ಟೆಂಬರ್ 12ರೊಳಗೆ ಅರ್ಜಿ ಸಲ್ಲಿಸಬೇಕು.
ತಾಲೂಕುವಾರು ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಗಳಿಗೆ ಇಲಾಖೆಯ ವೆಬ್ಸೈಟ್: www.bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ [email protected] ಮೂಲಕ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ:080-8050370006 ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.