ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಅಪರಾಧ ಪ್ರಕರಣಗಳಲ್ಲಿ ಆರೋಪಿ ತಪ್ಪಿಸಿಕೊಂಡಿದ್ದರೂ, ವಿದ್ಯುನ್ಮಾನ ಸಾಧನಗಳನ್ನು ಬಳಸಿ, ಸಾಕ್ಷಿಗಳ ಹೇಳಿಕೆಗಳನ್ನು ಆಡಿಯೋ ಮತ್ತು ವಿಡಿಯೋ ಮಾರ್ಗವಾಗಿಯೂ ಪಡೆದುಕೊಳ್ಳಬಹುದು.
ಇದಲ್ಲದೆ ವಿಚಾರಣೆ ವೇಳೆ ಆರೋಪಿ ಪರ ವಕೀಲರು ಹಾಜರಿದ್ದರೆ ಸಾಕು.ಆರೋಪಿಯ ಗೈರಿನಲ್ಲೇ ವಿಚಾರಣೆ ನಡೆಸಿ, ಶಿಕ್ಷೆಯನ್ನೂ ಪ್ರಕಟಿಸಬಹುದು. ಈ ಕುರಿತ ಕರ್ನಾಟಕದ ತಿದ್ದುಪಡಿ ಮಸೂದೆ “ದ ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್-2021ನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಲ್ಲಿಯವರೆಗೆ ನ್ಯಾಯಾಲಯದ ಕಲಾಪ ನಡೆಯುತ್ತಿರುವ ಹೊತ್ತಿನಲ್ಲಿ ಮಾತ್ರ, ಸಾಕ್ಷಿಗಳ ವಿಚಾರಣೆ ನಡೆಸಿ, ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಬಹುದಾಗಿತ್ತು. ಆದರೆ ಇನ್ನು ಮುಂದೆ ನೂತನ ಮಸೂದೆ ಅನ್ವಯವಾಗಲಿದೆ.