೨೦೨೨-೨೩ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಿನಾಂಕ ೨೫-೦೮-೨೦೨೨ರಂದು ಗುರುವಾರ ಕೊಳ್ನಾಡು ಗ್ರಾಮದ ಸರಕಾರಿ ಪ್ರೌಢಶಾಲೆ ಕಾಡುಮಠದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆ ತುಂಬೆ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ದಾಖಲೆಯನ್ನು ನಿರ್ಮಿಸಿದೆ. ಬಾಲಕರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಕಡೇಶಿವಾಲಯ ಮತ್ತು ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನ ದ್ವಿತೀಯ ಸ್ಥಾನ ಪಡೆದುಕೊಂಡವು.
ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಸರಕಾರಿ ಪ್ರೌಢಶಾಲೆ ಕಾಡುಮಠದ ಸಂಯುಕ್ತ ಆಶ್ರಯದಲ್ಲಿ ಪಂದ್ಯಾಟ ನಡೆಯಿತು.
ಪಂದ್ಯಾಟವನ್ನು ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಶೆಟ್ಟಿ ಅಗರಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನೆಬಿಸಾ ಖಾದರ್ ವಹಿಸಿದ್ದರು. ವೇದಿಕೆಯಲ್ಲಿ
2021-22ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಸರಕಾರಿ ಪ್ರೌಢಶಾಲೆ ಕಾಡುಮಠದ ಆಶ್ರಯದಲ್ಲಿ , ಕೊಳ್ನಾಡು ಗ್ರಾಮದ ಸರಕಾರಿ ಪ್ರೌಢಶಾಲೆ ಕಾಡುಮಠದಲ್ಲಿ ಆ. 25ರಂದು ನಡೆಯಿತು.ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆ ತುಂಬೆ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆಯಿತು. ಬಾಲಕರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಕಡೇಶಿವಾಲಯ ಮತ್ತು ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನ ದ್ವಿತೀಯ ಸ್ಥಾನ ಪಡೆದುಕೊಂಡವು.
ಪಂದ್ಯಾಟವನ್ನು ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ ಅಗರಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಬಿಸಾ ಖಾದರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಕಾಸ್ ಪುತ್ತೂರು ರಾಜ್ಯ ಬಿಜೆಪಿ ವಕ್ತಾರರು, ಮಾಧವ ಮಾವೆ ಉದ್ಯಮಿ, ನಾರಾಯಣ ಶೆಟ್ಟಿ ಕುಲ್ಯಾರು ತಾ.ಪ.ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರುಗಳಾದ ರಾಜಾರಾಮ್ ಹಗ್ಡೆ, ಲೋಹಿತ್, ಅನಿತಾ ಶೆಟ್ಟಿಗಾರ್, ಶಶಿಕಲಾ, ಸೌಮ್ಯಲತಾ, ದೈಹಿಕ ಶಿಕ್ಷಣ ಪರಿವೀಕ್ಷಕ ವಿಷ್ಣು ಹೆಬ್ಬಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ ಬಿ, ಪ್ರಗತಿಪರ ಕೃಷಿಕ ಮನೋರಂಜನ್ ಕರೈ, ಸಾಲೆತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಮೇರಾವು, ವಿಟ್ಲ ಲಯನ್ಸ್ ಅಧ್ಯಕ್ಷ ಸುಧೇಶ್ ಭಂಡಾರಿ ಎರ್ಮನಿಲೆ, ಬಾಲಕೃಷ್ಣ ಸೆರ್ಕಳ, ಬಿ ಎಸ್ ಎನ್ ಎಲ್ ನಿವೃತ್ತ ಇಂಜಿನಿಯರ್ ಗೋಪಾಲ್ ಕುಲಾಲ್, ಉದ್ಯಮಿ ಶ್ರೀಕಾಂತ್ ಶೆಟ್ಟಿ ಅಗರಿ, ಜೋಯಲ್ ಲೋಬೋ, ಶಿವಪ್ರಸಾದ್ ಶೆಟ್ಟಿ, ಚಿನ್ನಪ್ಪ, ಉಮಾನಾಥ್ ರೈ, ಮಹಮ್ಮದ್ ಆರೀಫ್, ಶಶಿಕಾಂತ್, ಭಾಸ್ಕರ್ ರಾವ್ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಧೂಮಾವತಿ ಬಂಟ ದೈವಗಳ ಸೇವಾ ಟ್ರಸ್ಟ್ ಅಧ್ಯಕ್ಷರೂ ನಿವೃತ್ತ ಸೈನಿಕರೂ ಆದ ವಿಠಲ ಶೆಟ್ಟಿ ಅಗರಿ ವಹಿಸಿ ಪ್ರಶಸ್ತಿಯನ್ನು ವಿತರಿಸಿದರು. ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕುಮಾರ್ ಶೆಟ್ಟಿ ಅಗರಿ, ನಿವೃತ್ತ ಶಿಕ್ಷಕ ಬಾಬು ಮಾಸ್ಟರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ತಾರೇಶ್ ನಾಯ್ಕ್ ಕೆ ಎಲ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಇಬ್ರಾಹಿಂ ವಂದಿಸಿದರು. ಪರಮೇಶ್ವರ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.
ಮುಖ್ಯ ಅತಿಥಿಗಳಾದ ಶ್ರೀ ವಿಕಾಸ್ ಪುತ್ತೂರು ರಾಜ್ಯ ಬಿಜೆಪಿ ವಕ್ತಾರರು, ಮಾಧವ ಮಾವೆ ಉದ್ಯಮಿ, ಶ್ರೀ ನಾರಾಯಣ ಶೆಟ್ಟಿ ಕುಲ್ಯಾರು ತಾ.ಪ.ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀ ರಾಜಾರಾಮ್ ಹಗ್ಡೆ, ಶ್ರೀ ಲೋಹಿತ್, ಶ್ರೀಮತಿ ಅನಿತಾ ಶೆಟ್ಟಿಗಾರ್, ಶ್ರೀಮತಿ ಶಶಿಕಲಾ, ಶ್ರೀಮತಿ ಸೌಮ್ಯಲತಾ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀ ವಿಷ್ಣು ಹೆಬ್ಬಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರೋಹಿಣಿ ಬಿ, ಪ್ರಗತಿಪರ ಕೃಷಿಕರಾದ ಶ್ರೀ ಮನೋರಂಜನ್ ಕರೈ, ಸಾಲೆತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಜಯಪ್ರಕಾಶ್ ಶೆಟ್ಟಿ ಮೇರಾವು, ವಿಟ್ಲ ಲಯನ್ಸ್ ಅಧ್ಯಕ್ಷರಾದ ಸುಧೇಶ್ ಭಂಡಾರಿ ಎರ್ಮನಿಲೆ, ಶ್ರೀ ಬಾಲಕೃಷ್ಣ ಸೆರ್ಕಳ, ಬಿ ಎಸ್ ಎನ್ ಎಲ್ ನಿವೃತ್ತ ಇಂಜಿನಿಯರ್ ಶ್ರೀ ಗೋಪಾಲ್ ಕುಲಾಲ್, ಉದ್ಯಮಿ ಶ್ರೀ ಶ್ರೀಕಾಂತ್ ಶೆಟ್ಟಿ ಅಗರಿ, ಶ್ರೀ ಜೋಯಲ್ ಲೋಬೋ, ಶಿವಪ್ರಸಾದ್ ಶೆಟ್ಟಿ, ಶ್ರೀ ಚಿನ್ನಪ್ಪ, ಶ್ರೀ ಉಮಾನಾಥ್ ರೈ, ಶ್ರೀ ಮಹಮ್ಮದ್ ಆರೀಫ್, ಶ್ರೀ ಶಶಿಕಾಂತ್, ಶ್ರೀ ಭಾಸ್ಕರ್ ರಾವ್ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಧೂಮಾವತಿ ಬಂಟ ದೈವಗಳ ಸೇವಾ ಟ್ರಸ್ಟ್ ಅಧ್ಯಕ್ಷರೂ ನಿವೃತ್ತ ಸೈನಿಕರೂ ಆದ ಶ್ರೀ ವಿಠಲ ಶೆಟ್ಟಿ ಅಗರಿ ವಹಿಸಿ ಪ್ರಶಸ್ತಿಯನ್ನು ವಿತರಿಸಿದರು. ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಮಾರ್ ಶೆಟ್ಟಿ ಅಗರಿ, ನಿವೃತ್ತ ಶಿಕ್ಷಕರಾದ ಶ್ರೀ ಬಾಬು ಮಾಸ್ಟರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಶ್ರೀ ತಾರೇಶ್ ನಾಯ್ಕ್ ಕೆ ಎಲ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಇಬ್ರಾಹಿಂ ವಂದಿಸಿದರು. ಶ್ರೀ ಪರಮೇಶ್ವರ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.