ಬಂಟ್ವಾಳ: ಸಹಕಾರಿ ರಂಗದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿರುವ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ರ‍್ತೆದಾರರ ಸೇವಾ ಸಹಕಾರಿ ಸಂಘ ತನ್ನ 9ನೇ ಶಾಖೆಯ ಉದ್ಘಾಟನಾ ಸಮಾರಂಭದ ಸಂಭ್ರಮದಲ್ಲಿದೆ.
ನಾವೂರು ಗ್ರಾಮದ ಮಣಿಹಳ್ಳ ಸರಪಾಡಿ ಕ್ರಾಸ್‌ನಲ್ಲಿರುವ ಶೇಷಾದ್ರಿ ಕಾಂಪ್ಲೆಕ್ಸ್ ನ ಒಂದನೇ ಮಹಡಿಯಲ್ಲಿ ಸೆ. 4ರಂದು ಬೆಳಿಗ್ಗೆ 9.30ಕ್ಕೆ ಮಣಿಹಳ್ಳ ಶಾಖೆ ಉದ್ಘಾಟನೆಗೊಳ್ಳಲಿದೆ. ಕಳೆದ ಜುಲೈ 15ರಂದು 8ನೇ ಶಾಖೆ ಮಾರ್ನಬೈಲ್ ನಲ್ಲಿ ಉದ್ಘಾಟನೆಗೊಂಡಿತ್ತು. ಸಂಘದ ಕಾರ್ಯಚಟುವಟಿಕೆಯನ್ನು ತಾಲೂಕಿನಾದ್ಯಂತ ವಿಸ್ತರಿಸುವ ಉದ್ದೇಶದಿಂದ ಕೇವಲ ಒಂದೂವರೆ ತಿಂಗಳ ಅವಧಿಯಲ್ಲಿ ಎರಡು ಪ್ರತ್ಯೇಕ ಶಾಖೆಗಳನ್ನು ಆರಂಭಿಸಿದ ಹೆಗ್ಗಳಿಕೆ ಸಜೀಪಮುನ್ನೂರು ರ‍್ತೆದಾರರ ಸೇವಾ ಸಹಕಾರಿ ಸಂಘದ್ದಾಗಿದೆ.
ಮಣಿಹಳ್ಳ ಶಾಖೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಲಿರುವರು. ಸಜೀಪಮುನ್ನೂರು ರ‍್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಬಿ.ರಮಾನಾಥ ರೈ ಗಣಕಯಂತ್ರ ಉದ್ಘಾಟಿಸುವರು, ಶ್ರೀ ಗುರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಮೆಲ್ಕಾರ್ ಇದರ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಭದ್ರತಾ ಕೊಠಡಿ ಉದ್ಘಾಟಿಸುವರು. ನಾವೂರು ಗ್ರಾ.ಪಂ. ಅಧ್ಯಕ್ಷ ಉಮೇಶ್ ಕುಲಾಲ್ ಠೇವಣಿ ಪತ್ರ ಬಿಡುಗಡೆಗೊಳಿಸುವರು, ಮುಖ್ಯ ಅತಿಥಿಗಳಾಗಿ ಕಕ್ಯಪದವು ಶ್ರೀ ಬ್ರಹ್ಮಬರ‍್ಕಳ ಗರಡಿ ಕ್ಷೇತ್ರದ ಅಧ್ಯಕ್ಷ, ಬಂಟ್ವಾಳ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉಪಾಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ರ‍್ಲಾ ವೆಂಲಕಣಿ ರ‍್ಚಿನ ರ‍್ಮಗುರು ವಂ.ಫಾ| ಜೋನ್ ಪಿರೇರಾ, ಅಗ್ರಹಾರ ಎಂ.ಜೆ.ಎಂ. ಖತೀಬರಾದ ಶಮೀರ್ ಫೈಝಿ, ಮಣ್ಣಿಹಳ್ಳ ಶ್ರೇಯಾ ಸ್ವೀಟ್ಸ್ ಮಾಲಕ ಜಿತೇಂದ್ರ ಸಾಲ್ಯಾನ್ ಭಾಗವಹಿಸುವರು.
ಮೂರ್ತೆದಾರಿಕೆ ಮಾಡುವ ಕುಲ ಕಸುಬುದಾರರ ಶ್ರೇಯೋಭಿವೃದ್ಧಿ ಹಾಗೂ ಅವರ ಆರ್ಥಿಕ ಜೀವನ ಮಟ್ಟ ಸುಧಾರಿಸುವ ಸದುದ್ದೇಶದೊಂದಿಗೆ 1991ರಲ್ಲಿ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಸುಭಾಷ್‌ನಗರದ ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಪ್ರಾರಂಭಗೊಂಡ ಬ್ಯಾಂಕ್ 2005 ನವೆಂಬರ್ 18ರಂದು ಬೊಳ್ಳಾಯಿಯಲ್ಲಿ ಬ್ಯಾಂಕಿಂಗ್ ವ್ಯವಹಾರವನ್ನು ಆರಂಭಿಸಿತು. ಬಂಟ್ವಾಳ ತಾಲೂಕಿನ ಎಲ್ಲಾ ಭಾಗಗಳಲ್ಲಿರುವ ರ‍್ತೆದಾರರಿಗೆ ಅನುಕೂಲವಾಗಬೇಕು ಎನ್ನುವ ಉಶದಿಂದ ಹಂತ ಹಂತವಾಗಿ ಬೋಳಂತೂರು, ಚೇಳೂರು, ಫಜೀರು, ವಾಮದಪದವು, ಸಿದ್ದಕಟ್ಟೆ, ಅಣ್ಣಳಿಕೆ, ಮಾರ್ನಬೈಲುವಿನಲ್ಲಿ ಶಾಖೆಗಳನ್ನು ತೆರೆದು ಬ್ಯಾಂಕಿಂಗ್ ಸೇವೆಗಳನ್ನು ನೀಡುತ್ತಿದೆ. ಗ್ರಾಹಕರಿಗೆ ಕಡಿಮೆ ಬಡ್ಡಿದರದಲ್ಲಿ ಆಭರಣ ಸಾಲ, ಅಡಮಾನ ಸಾಲ, ವಾಹನ ಸಾಲ, ರ‍್ತೆದಾರಿಕೆ ಸಾಲ, ವ್ಯಾಪಾರ ಸಾಲ, ವೈಯಕ್ತಿಕ ಸಾಲ, ಠೇವಣಾತಿ ಸಾಲ, ಸ್ವಸಹಾಯ ಸಾಲ, ಮಹಿಳೆಯರಿಗೆ ತ್ವರಿತ ಸಾಲ, ಪಿಗ್ಮಿ ಮುಂಗಡ ಸಾಲವನ್ನು ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೆ ಮತ್ತು ಸಂಘ ಸಂಸ್ಥೆಗಳ ಠೇವಣಿಗೆ 0.5% ಹೆಚ್ಚುವರಿ ಬಡ್ಡಿ ನೀಡಲಾಗುತ್ತಿದೆ, ಸಿದ್ದಕಟ್ಟೆ ಶಾಖೆಯಲ್ಲಿ ಇ- ಸ್ಟ್ಯಾಂಪಿಂಗ್ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ.
ಸಂಘವು ಗುರುಶ್ರೀ ಎಂಬ ಹೆಸರಿನಲ್ಲಿ ಸ್ವಸಹಾಯ ಗುಂಪುಗಳನ್ನು ರಚಿಸಿದ್ದು ಸ್ವಸಹಾಯ ಸಂಘದ ಸದಸ್ಯರಿಗೆ ಅತೀ ಕಡಿಮೆ ಅವಧಿಯಲ್ಲಿ ಬ್ಯಾಂಕ್ ಸಾಲವನ್ನು ನೀಡುವ ಯೋಜನೆಯನ್ನು ಹೊಂದಿದೆ. ಸೇವಾ ರ‍್ಯವಾಗಿ ಸಂಘದ ಸದಸ್ಯರಿಗೆ ವಿದ್ರ‍್ಥಿ ವೇತನ, ಕಡುಬಡತನದಲ್ಲಿರುವ ಅನಾರೋಗ್ಯ ಪೀಡಿತ ರ‍್ತೆದಾರರಿಗೆ ಸಹಾಯಧನ ನೀಡಲಾಗುತ್ತಿದೆ. ಪ್ರತರ‍್ಷ ಹಿರಿಯ ರ‍್ತೆದಾರರನ್ನು ಗುರುತಿಸಿ ಗೌರವಿಸಲಾಗುತ್ತಿದೆ.
ಪ್ರಸ್ತುತ ಒಟ್ಟು 7297 ಸದಸ್ಯರನ್ನು ಹೊಂದಿ 84,30,38,511.85 ವ್ಯಾಪಾರ ವಹಿವಾಟನ್ನು ನಡೆಸಿದೆ. ಈ ರ‍್ಷ 10,65,814 ರೂಪಾಯಿ ವಾರ್ಷಿಕ ಲಾಭ ಗಳಿಸಿದ್ದು ಸದಸ್ಯರಿಗೆ ಶೇ.25 ಡಿವಿಡೆಂಡ್ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹೊಸ 5 ಶಾಖೆಗಳನ್ನು ರ‍್ಯವ್ಯಾಪ್ತಿಯಲ್ಲಿ ತೆರಯುವ ಯೋಜನೆಯನ್ನು ಸಂಘ ಹೊಂದಿದೆ.
ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ, ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಬೀಡಿನಪಾಲು, ರ‍್ದೇಶಕರಾಗಿ ರಮೇಶ್ ಅನ್ನಪ್ಪಾಡಿ, ವಿಠಲ ಬೆಳ್ಚಾಡ ಚೇಳೂರು, ಅಶೋಕ್ ಪೂಜಾರಿ ಕೋಮಾಲಿ, ಗಿರೀಶ್ ಕುಮಾರ್ ರ‍್ವ, ಜಯಶಂಕರ್ ಕಾನ್ಸಾಲೆ, ಕೆ. ಸುಜಾತ ಎಂ., ವಾಣಿವಸಂತ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಮಮತಾ ಜಿ. ಸಂಘವನ್ನು ಮುನ್ನಡೆಸುತ್ತಿದ್ದಾರೆ.