ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ವಿಟ್ಲ: ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನವನ್ನು ಸೆ.5ರಂದು ಸಂಭ್ರಮದಿಂದ ಆಚರಿಸಲಾಯಿತು . ಸರಕಾರಿ ಪರಿಶಿಷ್ಠ ವರ್ಗಗಳ ಆಶ್ರಮ ಶಾಲೆ ಕಡೇಶಿವಾಲಯದ ನಿವೃತ್ತ ಮುಖ್ಯ ಶಿಕ್ಷಕ ಎಂ ವೀರಪ್ಪ ನಾಯ್ಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಶಿಕ್ಷಕರು ಮಕ್ಕಳೊಂದಿಗೆ ಕುಣಿದು ನಲಿದು ಬೋಧನೆ ಮಾಡಿದರೆ ಶಿಕ್ಷಣವು ಪರಿಣಾಮಕಾರಿಯಾಗುತ್ತದೆ . ಚಿತ್ರಕಲೆ , ಸಂಗೀತ , ನಾಟ್ಯ ಮುಂತಾದ ಲಲಿತಕಲೆಗಳನ್ನು ಒಳಗೊಂಡ ಶಿಕ್ಷಣದಿಂದ ಮಕ್ಕಳ ಸರ್ವಾಂಗೀಣ ಬೆಳವಣಿಗೆಯಾಗುತ್ತದೆ ಎಂದು ಶಿಕ್ಷಕರಿಗೆ ಹಿತವಚನಗೈದರು.


ಶಾಲಾ ಸಂಚಾಲಕ ಪ್ರಹ್ಲಾದ್ ಜೆ.ಶೆಟ್ಟಿ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಾಲೆಯಲ್ಲಿ ನಡೆಯುತ್ತಿರುವ ಪ್ರತಿಯೊಂದು ಚಟುವಟಿಕೆಗಳು ಮಗುವಿಗೆ ಪಾಠವಾಗಿರುತ್ತದೆ . ಉತ್ತಮವಾದಂತಹ ಪಠ್ಯೇತರ ಚಟುವಟಿಕೆಗಳನ್ನು ನಮ್ಮಲ್ಲಿ ಹಮ್ಮಿಕೊಳ್ಳುತ್ತೇವೆ. ಮಕ್ಕಳು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿ ಮಾತನ್ನು ಹೇಳಿದರು .
ಆಡಳಿತಾಧಿಕಾರಿ ರವೀಂದ್ರ ದರ್ಬೆ, ಶಾಲಾ ಮುಖ್ಯಶಿಕ್ಷಕಿ ವಿಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯೆ ಸುಭಾಷಿಣಿ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಆಕಾಶ್ ಸ್ವಾಗತಿಸಿ, ನಿಶ್ಚಿಂತ ಐತಾಳ್ ಕೆ ವಂದಿಸಿ , ಸ್ವೀಡಲ್ ಐಶು ಕ್ರಾಸ್ತ ಮತ್ತು ಸನಿಹ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here