ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜ್ ನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

0

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿರೋಡ್ ಟ್ರಸ್ಟ್ (ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ ವತಿಯಿಂದ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜ್ ನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಕಾಲೇಜಿನ ವಾಣಿಜ್ಯ ಉಪನ್ಯಾಸಕ ದಿನೇಶ್ ಅಧ್ಯಕ್ಷತೆಯಲ್ಲಿ ‌ಸೆ.5ರಂದು ಜರುಗಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜನಜಾಗೃತಿ ವೇದಿಕೆಯ ಬಂಟ್ವಾಳ ತಾಲೂಕು ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ʼಯುವ ಸಮೂಹ ದುಶ್ಚಟ ಗಳಿಗೆ ಬಲಿಯಾಗಲು ಕಾರಣವಾಗುವ ಅಂಶಗಳು ಮತ್ತು ಅದರಿಂದ ಬಿಡುಗಡೆಯಾಗಲು ಅನುಸರಿಸಬೇಕಾದ ಅಂಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ವಲಯ ಅಧ್ಯಕ್ಷೆ ತುಳಸಿ, , ಬಾಳ್ತಿಲ ಒಕ್ಕೂಟದ ಅಧ್ಯಕ್ಷೆ ಉಮಾವತಿ, ವೆಂಕಟರಾಯ್ ಪ್ರಭು, ಸೇವಾ ಪ್ರತಿನಿಧಿಗಳಾದ ವಿದ್ಯಾ, ರೇಣುಕಾ ಉಪಸ್ಥಿತರಿದ್ದರು. ಸ್ವಾಸ್ತ್ಯ ಸಂಕಲ್ಪ ಕುರಿತು ಆಯೋಜಿಸಲಾದ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು


ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ ಪ್ರಾಸ್ತವಿಕ ನುಡಿಗಳನ್ನಾಡಿ, ಕಾಲೇಜಿನ ಮಕ್ಕಳಿಗೆ ದುಶ್ಚಟ ಮುಕ್ತ ಸಮಾಜವನ್ನು ನಿರ್ಮಾಣ ಮಾಡುವಂತೆ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಿಂಚನಾ ಶೆಟ್ಟಿ ಸ್ವಾಗತಿಸಿ , ಆಶ್ರೀತಾ ಕೆ. ಧನ್ಯವಾದಗೈದು. ರಕ್ಷಿತಾ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here