ಉಡುಪಿ: ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜಯಂತಿಯ ಅಂಗವಾಗಿ ಮಲ್ಪೆ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಸೆ.10ರಂದು ಬೆಳಗ್ಗೆ ಧಾರ್ಮಿಕ ಪೂಜಾ ವಿಧಿ – ವಿಧಾನಗಳೊಂದಿಗೆ ಗುರು ಪೂಜೆ ನೆರವೇರಿತು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲ್ಪೆ ಬಿಲ್ಲವ ಸಂಘದ ಅಧ್ಯಕ್ಷ ಶ್ರೀ ಕೃಷ್ಣಪ್ಪ ಜತ್ತನ್ ವಹಿಸಿಸಿದ್ದು, ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲ ಶಾಲಾ ಅಧ್ಯಕ್ಷ ರಘುರಾಮ್ ಸುವರ್ಣ ರವರು ದಿಕ್ಸೂಚಿ ಭಾಷಣ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಗುರ್ಮೆ ಫೌ೦ಡೇಷನ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಪುರಸ್ಕರಿಸಿ, ಮಾತನಾಡಿ ವಿದ್ಯೆಯಿಂದ ಸ್ವತಂತ್ರರಾಗಿರಿ ಎಂಬ ಗುರುಗಳ ಸಂದೇಶದನ್ವಯ ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘವು ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ವಿದ್ಯಾದಾನ ಮಾಡುವ ಮೂಲಕ ಅವರ ಸಂದೇಶವನ್ನು ಪರಿಪೂರ್ಣಪಡಿಸುವಲ್ಲಿ ಸಫಲವಾಗಿದೆ ಎಂದು ಅಭಿನಂದಿಸಿದರು
2021 – 22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 90% ಕ್ಕಿಂತ ಅಧಿಕ ಅಂಕ ಪಡೆದ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಅಂತಿಮ ಪದವಿ ಪರೀಕ್ಷೆಯಲ್ಲಿ 80% ಕ್ಕಿಂತ ಅಧಿಕ ಅಂಕ ಪಡೆದ ಕೊಡವೂರು ಗ್ರಾಮಕ್ಕೆ ಒಳಪಟ್ಟ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ನಾರಾಯಣಗುರು ಜಯಂತಿ ಪ್ರಯುಕ್ತ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಬಿಲ್ಲವ ಮಹಿಳಾ ಘಟಕದ ಸದಸ್ಯರಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಮಲ್ಪೆ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯು 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಾಲೆಯು 100% ಫಲಿತಾಂಶ ಪಡೆದ ಬಗ್ಗೆ ಸಂಘದ ವತಿಯಿಂದ ಶಾಲಾ ಮುಖ್ಯೋಪಾಧ್ಯಾಯ ಶಶಿಕುಮಾರ್ ಮತ್ತು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಡಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಬಿಲ್ಲವ ಮಹಿಳಾ ಘಟಕ ಹಾಗೂ ನಾರಾಯಣಗುರು ಸೇವಾದಳದ ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ದಿವಾಕರ್ ಸನಿಲ್, ಕಾನಗುಡ್ಡೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಜಯದುರ್ಗಾ ಪರಮೇಶ್ವರಿ ದೇವಸ್ಥಾನ ಕನ್ನರ್ಪಾಡಿ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ, ಕರ್ಕೇರ ಇಂಜಿನಿಯರಿಂಗ್ ವರ್ಕ್ಸ್ ಕೊಪ್ಪಲ್ ತೋಟ ಇದರ ಮಾಲಕ ಪ್ರಕಾಶ್ ಕರ್ಕೇರ, ಸಂಘದ ಉಪಾಧ್ಯಕ್ಷ ಲೋಕನಾಥ್ ಕರ್ಕೇರ, ಕೋಶಾಧಿಕಾರಿ ಹರಿನಾಥ್ ಕೆ. ಸುವರ್ಣ, ಶಾಲಾ ಕಾರ್ಯದರ್ಶಿ ಲಕ್ಷ್ಮೀಶ್ ಎಂ. ಬಂಗೇರ, ನಾರಾಯಣಗುರು ಸೇವಾದಳದ ಸಂಚಾಲಕ ನಿತಿನ್ ಅಮೀನ್, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷ ಆಶಾ ಜೆ. ಬಂಗೇರ, ಭಜನಾ ಸಂಚಾಲಕ ಬಿ. ಬಿ. ಪೂಜಾರಿ, ವಿದ್ಯಾರ್ಥಿಗಳು, ಪೋಷಕರು ಸಂಘದ ಮತ್ತು ಉಪ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ಸುನಿಲ್ ದಾಸ್ ಎಂ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಘಟಕದ ಸದಸ್ಯರಾದ ಚಂದ್ರಿಕಾ ವಿಜಯ್, ಜಯಲಕ್ಷ್ಮಿ ಶೇಖರ್, ನಿವೇದಿತಾ ಯಾದವ್ ಪಾರ್ಥಿಸಿದರು. ಜೊತೆ ಕಾರ್ಯದರ್ಶಿ ಉಮೇಶ್ ಸುವರ್ಣ ವಂದಿಸಿದರು. ಬಿಲ್ಲವ ಮಹಿಳಾ ಘಟಕದ ಸದಸ್ಯರಾದ ವಾರಿಜಾ ಮಧುಸೂದನ್ ಮತ್ತು ನಿರ್ಮಾಲ ಕಾರ್ಯಕ್ರಮ ನಿರೂಪಿಸಿದರು.