ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

0

ಬಂಟ್ವಾಳ : ಬಂಟ್ವಾಳ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆಯಲ್ಲಿ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ , ಬೂಡಾ ಅ‌ಧ್ಯಕ್ಷ ದೇವದಾಸ್ ಶೆಟ್ಟಿ, ವಿಟ್ಲ ಉಪತಹಶೀಲ್ದಾರ್ ವಿಜಯ ವಿಕ್ರಮ್, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಬಂಟ್ವಾಳ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ  ಸುಧಾಕರ ಆಚಾರ್ಯರು ಅಧ್ಯಕ್ಷತೆಯನ್ನು ವಹಿಸಿದ್ದರು.

ಸಂಸ್ಕೃತ ಭಾಷಾ ಪ್ರಾಧ್ಯಾಪಕ ಮುರಳೀಧರ ವಿಶ್ವಕರ್ಮ ದಿನಾಚರಣೆಯ ಬಗ್ಗೆ ಉಪನ್ಯಾಸ ನೀಡಿದರು. ವಿಶ್ವ ಕರ್ಮ ಸೇವಾ ಸಮಿತಿ ಕಾರ್ಯದರ್ಶಿ ಸಂದೀಪ್ ಬಿ. ಭಂಡಾರಿಬೆಟ್ಟು, ಮಹಿಳಾ ಅಧ್ಯಕ್ಷೆ ಪ್ರತಿಮ ಉಪೇಂದ್ರ ಆಚಾರ್ಯ, ಸದಸ್ಯ ಉಮೇಶ್ ಆಚಾರ್ಯ, ತಾಲೂಕು ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here