ಪುತ್ತೂರು: ದೇಶದ ಭವಿಷ್ಯದ ನಿರ್ಮಾಣದಲ್ಲಿ ಮಹತ್ತರ ಸೇವೆ ನೀಡಿತ್ತಿರುವ ಮಹಾನ್ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಸೇವೆಯ ಮೂಲಕ ಆಚರಣೆ ಮಾಡಿರುವ ಬಂಟ್ವಾಳ ಯುವ ಮೋರ್ಚಾದ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಬಿಜೆಪಿ ಯುವಮೊರ್ಚಾ ಬಂಟ್ವಾಳ ವಲಯ ವತಿಯಿಂದ ಸೆ.17 ರಂದು ಕೆ.ಎಂ.ಸಿ.ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಬಿಸಿರೋಡು ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ರಕ್ತದಾನ, ಅಂಗಾಂಗ ದಾನ ಮತ್ತು ನೇತ್ರದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಯುವ ಮೋರ್ಚಾ ಪ್ರಭಾರಿ ಪುರುಷೋತ್ತಮ ಶೆಟ್ಟಿ ವಾಮದಪದವು, ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕಿನ ಡಾ.ಐಶ್ವರ್ಯ ತೇಜ ಉಪಸ್ಥಿತರಿದ್ದರು. ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಟ್ರಾನ್ಸ್ ಪ್ಲಾಟ್ ಸಂಯೋಜಕಿ ಪದ್ಮಾ ವೇಣೂರು ಅವರು ಅಂಗಾಂಗ ದಾನದ ಕುರಿತು ಮಾಹಿತಿ ನೀಡಿದರು. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಶ್ವಥ್ ರಾವ್ ಬಾಳಿಕೆ ಸ್ವಾಗತಿಸಿದರು. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪಾಡಿ ಕಾರ್ಯಕ್ರಮ ನಿರ್ವಹಿಸಿದರು.