‘ಪ್ರತೀ ಪಂಚಾಯಿತಿಗೆ ಮಾದರಿ ಶಾಲೆ’ ಯೋಜನೆ : ಪ್ರತಾಪಸಿಂಹ ನಾಯಕ್
ಬಂಟ್ವಾಳ: ವಿದ್ಯಾರ್ಥಿಗಳ ಕೊರತೆ ನಿವಾರಣೆ ಜೊತೆಗೆ ಗ್ರಾಮಿಣ ಮತ್ತು ನಗರ ಪ್ರದೇಶ ಎಂಬ ತಾರತಮ್ಯ ಇಲ್ಲದೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರತೀ ಗ್ರಾಮ ಪಂಚಾಯಿತಿಗೆ ಒಂದು ಮಾದರಿ ಶಾಲೆ ನಿರ್ಮಿಸುವ ಯೋಜನೆ ಸರ್ಕಾರ ಹಾಕಿಕೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ.
ಇಲ್ಲಿನ ಕಾವಳಮೂಡೂರು ಗ್ರಾಮದ ಕೆದ್ದಳಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಎಂ.ತುಂಗಪ್ಪ ಬಂಗೇರ, ವಿದ್ವಾನ್ ವೆಂಕಟ್ರಮಣ ಮುಚ್ಚಿನ್ನಾಯ, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣ ಉಡುಪ, ಮೀನುಗಾರಿಕಾ ಇಲಾಖೆ ನಿವೃತ್ತ ಉಪನಿರ್ದೇಶಕ ಪಾರ್ಶ್ವನಾಥ ಪಡಂತ್ರ್ಯಬೆಟ್ಟು, ನಿವೃತ್ತ ಶಿಕ್ಷಕ ಕೃಷ್ಣಪ್ಪ ಬಂಗೇರ, ನಿವೃತ್ತ ತಹಶೀಲ್ದಾರ ಲೋಕೇಶ್ ಕೆ., ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಾಘವೇಂದ್ರ ಬಲ್ಲಾಳ್, ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ವ್ಯವಸ್ಥಾಪಕ ಜೀವನ್ ಕೊಲ್ಯ, ಉದ್ಯಮಿ ಹೇಮಂತ ಕುಮಾರ್ ಮೂರ್ಜೆ, ಪಿಡಿಒ ರಚನ್ ಕುಮಾರ್, ವೈದ್ಯಾಧಿಕಾರಿ ಡಾ.ರಿತೇಶ್ ಶೆಟ್ಟಿ, ಗ್ರಾ.ಪಂ.ಸದಸ್ಯೆ ರೇವತಿ, ವೀಣಾ, ಗುತ್ತಿಗೆದಾರ ಮೋಹನ ಶೆಟ್ಟಿ ನರ್ವಲ್ದಡ್ಡ, ಬ್ರಹ್ಮ ಕುಮಾರಿ ಈಶ್ವರವಿಶ್ವವಿದ್ಯಾಲಯ ಭಗಿನಿ ಸರೋಜಿನಿ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಕೆದ್ದಳಿಕೆ ಮತ್ತಿತರರು ಇದ್ದರು.
ಇದೇ ವೇಳೆ ಶಿಕ್ಷಕಿ ಉಮಾ ಡಿ.ಗೌಡ ಇವರನ್ನು ಸನ್ಮಾನಿಸಲಾಯಿತು. ಮುಖ್ಯಶಿಕ್ಷಕ ಕುಮಾರ್ ಸಿ.ಸ್ವಾಗತಿಸಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಶೆಟ್ಟಿ ಕಾವಳಕಟ್ಟೆ ಪ್ರ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಚಂದಪ್ಪ ಪೂಜಾರಿ ವಂದಿಸಿದರು. ಶಿಕ್ಷಕ ಉದಯ ಕುಮಾರ್ ಶೆಟ್ಟಿ ಮೇಲ್ಮನೆ ಕಾರ್ಯಕ್ರಮ ನಿರೂಪಿಸಿದರು.