ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕದಲ್ಲಿ ಬಿಜೆಪಿ ಎಸ್.ಟಿ.ಮೋರ್ಚ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಅ.9ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಭಾಂಗಣದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಪರಿಶಿಷ್ಟರ ಜೀವನ ಮಟ್ಟ ಸುಧಾರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಎಸ್ ಟಿ ಮೀಸಲಾತಿ ಪ್ರಮಾಣ ಶೇ.3ರಿಂದ 7ಕ್ಕೆ ಹೆಚ್ಚಳಗೊಳಿಸಿದೆ ಎಂದು ಹೇಳಿದರು.
ಎಸ್.ಟಿ.ಮೋರ್ಚಾದ ಜಿಲ್ಲಾಧ್ಯಕ್ಷ ರಾಮ ನಾಯ್ಕ್ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಮಹರ್ಷಿ ವಾಲ್ಮೀಕಿ ಜಯಂತಿ ಬಗ್ಗೆ ಮಾಹಿತಿ ನೀಡಿದರು. ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಮೋರ್ಚಾದ ಪ್ರಭಾರಿ ರಮಾನಾಥ ರಾಯಿ, ಬಾಳ್ತಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಿರಣ್ಮಯಿ, ಬರಿಮಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಗೋಳ್ತಮಜಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಭಿಷೇಕ್ ಶೆಟ್ಟಿ, ದೇರಳಕಟ್ಟೆ ಯೆನಪೋಯ ಆಸ್ಪತ್ರೆಯ ವೈದ್ಯೆ ಡಾ.ಅಶ್ವಿನಿ ಶೆಟ್ಟಿ ಇದ್ದರು.
ಗ್ರಾ.ಪಂ.ಸದಸ್ಯೆ ಪುಷ್ಲಲತಾ ಸ್ವಾಗತಿಸಿ, ಸದಸ್ಯ ವಿಠಲ್ ನಾಯ್ಕ್ ವಂದಿಸಿದರು.