ಗ್ರಾಮೀಣ ಕುಡಿಯುವ ನೀರು ಮತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮ ಪಂಚಾಯತ್ ನಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣಾ ಕಾರ್ಯಗಾರವನ್ನು ಅ.15ರಂದು ಆಯೋಜಿಸಲಾಗಿತ್ತು.
ಈ ತರಭೇತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಬಿಸˌ ಉಪಾಧ್ಯಕ್ಷರಾದ ಸುಭಾಷ್ ಶೆಟ್ಟಿˌ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ ˌಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರುˌ ಶಾಲಾ ಶಿಕ್ಷಕರುˌ ಗ್ರಾಮಸ್ಥರು ಹಾಗೂ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು. ಜಲ ಜೀವನ್ ಮಿಷನ್ ನ ಸಮುದಾಯ ಸಂಘಟಕಿ ಗುಣವತಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ತಾಲೂಕಿನ ಎಂ ಜಿ.ಎನ್.ಆರ್ ಇ .ಜಿ.ಎ ಯ IEC ಸಿಬ್ಬಂದಿ ರಾಜೇಶ್ ಜಲ ಮರುಪೂರಣ ಘಟಕ ಮತ್ತು ದ್ರವತ್ಯಾಜ್ಯ ಘಟಕ ವೆಚ್ಚದ ಬಗ್ಗೆ ಮಾಹಿತಿ ನೀಡಿದರು. ಅನುಷ್ಟಾನ ಬೆಂಬಲ ಸಂಸ್ಥೆಯ ಸಿಬ್ಬಂದಿ ಚಂದ್ರಶೇಖರ್ ಕಾರ್ಯಕ್ರಮವನ್ನು ಆಯೋಜಿಸಿ ಯಶಸ್ವಿಗೊಳಿಸಿದರು.