ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ , ಪುಂಜಾಲಕಟ್ಟೆ ಘಟಕ ಸಮಿತಿಯ ವತಿಯಿಂದ ನ.20ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿರುವ ಐದನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರವಿವಾರ ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಸಭಾಭವನದಲ್ಲಿ ಜರಗಿತು.
ಚಲನಚಿತ್ರ, ರಂಗಭೂಮಿ ರಂಗ ಕಲಾವಿದ ಸುಂದರ ರೈ ಮಂದಾರ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಯಕ್ಷಗಾನ ಸರ್ವಾಂಗೀಣ ಕಲೆಯಾಗಿದ್ದು,ಮಾನಸಿಕ, ದೈಹಿಕವಾಗಿ ಶಕ್ತಿ ನೀಡುವುದರೊಂದಿಗೆ ಜ್ಞಾನವನ್ನು ಉದ್ಧೀಪನಗೊಳಿಸುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಯಕ್ಷಗಾನದಲ್ಲಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದರು.
ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಮಾತನಾಡಿ, ಅಶಕ್ತ ಕಲಾವಿದರಿಗೆ ನೆರವು ನೀಡುವ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಾರ್ಯ ಅಭಿನಂದನೀಯ ಎಂದು ಹೇಳಿದರು.
ಸಮಿತಿ ಗೌರವಾಧ್ಯಕ್ಷ ಜಯಂತ್ ಶೆಟ್ಟಿ ಪಿಲಾತಬೆಟ್ಟು ವ್ಯ.ಸೇ.ಸ. ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ, ಮುರುಘೇಂದ್ರ ಮಿತ್ರ ಮಂಡಳಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪುಂಜಾಲಕಟ್ಟೆ, ಗುತ್ತಿಗೆದಾರ ಮೋಹನ ಶೆಟ್ಟಿ ನರ್ವಲ್ದಡ್ಡ, ಪ್ರಮುಖರಾದ ವಿನೋದ್ ಶೆಟ್ಟಿ ನಂದಾಜೆ,ದಿವಾಕರದಾಸ್ ಕಾವಳಕಟ್ಟೆ, ಕಿಶೋರ್ ಶೆಟ್ಟಿ ಮೂಡಾಯೂರು,ಅಜಿತ್ ಶೆಟ್ಟಿ ಕಾರಿಂಜ, ಅಶೋಕ್ ಮಡಂತ್ಯಾರು, ಯಕ್ಷ ಗುರು ದೇವಿಪ್ರಸಾದ ಆಚಾರ್ಯ, ಘಟಕದ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಬುಳಕ್ಕಿನಕೋಡಿ, ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಪ್ರ.ಕಾರ್ಯದರ್ಶಿ ನವೀನ ಶೆಟ್ಟಿ ಸೇವಾ, ಮಹಿಳಾ ಘಟಕದ ಅಧ್ಯಕ್ಷೆ ಉಮಾ ಡಿ. ಗೌಡ, ಗೌರವಾಧ್ಯಕ್ಷೆ ಲಕ್ಷ್ಮಿ ಸಂಜೀವ ಶೆಟ್ಟಿ ಮುಗೆರೋಡಿ. ಗೌರವ ಸಲಹೆಗಾರ‍್ತಿ ತುಳಸಿ ಹಾರಬೆ, ಪ್ರ. ಕಾರ್ಯದರ್ಶಿ ಸೌಮ್ಯಾ ಮಹಾಬಲ ಶೆಟ್ಟಿ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಘಟಕದ ಉಪಾಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸುರೇಶ್ ಶೆಟ್ಟಿ ಮಜಲೋಡಿ ವಂದಿಸಿದರು.