ತಕ್ಷಣ ಸಮಸ್ಯೆ ಗೆ ಪರಿಹಾರ ಮಾಡದಿದ್ದರೆ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕಾದೀತು, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಂಸದ, ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು .
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಕುಡಿಯುವ ನೀರಿನ ಪೈಪ್ ಗಳಿಗೆ ಹಾನಿಯಾಗಿದ್ದು, ಸುಮಾರು ಐದು ಗ್ರಾಮಗಳಿಗೆ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಾದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಧಿಕಾರಿಗಳ ಸಭೆ ನೀಡಿ ಎಚ್ಚರಿಕೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಜೊತೆ ಭೂ ಒತ್ತುವರಿ, ಗುಡ್ಡ ಅಗೆತ, ಮೆಸ್ಕಾಂ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಬೇಕು, ಜೊತೆಗೆ ಪ್ರತಿ 15 ದಿನಗಳಿಗೊಮ್ಮೆ ಶಾಸಕರ ಜೊತೆ ಅಧಿಕಾರಿಗಳು ಹಾಗೂ ಗುತ್ತಿಗೆ ವಹಿಸಿಕೊಂಡ ಕಂಪೆನಿಯ ಸಿಬ್ಬಂದಿಗಳು ಸಭೆ ನಡೆಸಬೇಕು.
ಗ್ರಾ.ಪಂ.ವ್ಯಾಪ್ತಿಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗ್ರಾಮ ಮಟ್ಟದ ಅಧಿಕಾರಿಗಳ ಜೊತೆಯೂ ಸಭೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.