ಬಂಟ್ವಾಳ : 67ನೇ ಕನ್ನಡರಾಜ್ಯೋತ್ಸವದ ಅಂಗವಾಗಿ, ಕನ್ನಡ ಸಂಸ್ಕೃತಿ ಇಲಾಖೆ ನಡೆಸಿದಂತಹ ಕೋಟಿ ಕಂಠ ಗಾಯನದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 1317 ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಮಾತೃಭಾರತಿ ಸದಸ್ಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಭಾಗವಹಿಸಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ್ ಭಟ್ ಕಲ್ಲಡ್ಕಮಾತಾನಾಡುತ್ತಾ, ನಮ್ಮ ಸಂಸ್ಕೃತಿ, ಜೀವನ ಮೌಲ್ಯಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದು ಮಾತೃ ಭಾಷೆಯಲ್ಲಿ.ನಮ್ಮ ಭಾಷೆಯ ಮುಖಾಂತರ ಹೇಳಿದಾಗ ಬಹುಬೇಗನೆ ಅರ್ಥವಾಗುತ್ತದೆ.ಇಂದು ಬೇರೆ ಬೇರೆ ಸಾಹಿತಿಗಳು ಬರೆದಿರುವ ಹಾಡನ್ನು ಹಾಡುವುದರ ಮೂಲಕ ನಮ್ಮ ಭಾಷೆಯ ಮೇಲೆ ಇನ್ನಷ್ಟು ಅಭಿಮಾನ ಬರಲಿ. ಸ್ವಾಭಿಮಾನ ನಿರ್ಮಾಣವಾಗಲಿ ಎನ್ನುವ ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕದ ನಾಡಗೀತೆ ಜೈ ಭಾರತ ಜನನಿಯ ತನುಜಾತೆ, ಬಾರಿಸು ಕನ್ನಡ ಡಿಂಡಿಮವ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ವಿಶ್ವ ವಿನೂತನ ವಿದ್ಯಾಚೇತನ ಹಾಗೂ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಒಟ್ಟು 5 ಗೀತೆಗಳನ್ನು ಎಲ್ಲಾ ವಿದ್ಯಾರ್ಥಿಗಳು ಒಟ್ಟು ಸೇರಿ ಹಾಡಿದರು.
ನಂತರ ಪ್ರತಿಜ್ಞಾವಿಧಿ ಭೋದಿಸಲಾಯಿತು.7ನೇ ತರಗತಿಯ ರಮ್ಯ ಪ್ರತಿಜ್ಞಾ ವಿಧಿ ಭೋದಿಸಿದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಸಾಲ್ಯಾನ್, ಶಾಲಾ ಶೈಕ್ಷಣಿಕ ಪರಿವೀಕ್ಷಕರಾದ ಮಲ್ಲಿಕಾ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅಂಕಿತ ಸ್ವಾಗತಿಸಿ, ಪವನ್ ನಾಯಕ್ ನಿರೂಪಿಸಿದರು .ದಕ್ಷ ವಂದಿಸಿದರು.