ನ.14-ಜ.24:ಗ್ರಾ.ಪಂ.ಗಳಲ್ಲಿ ಮಕ್ಕಳ ಸ್ನೇಹಿ ಗ್ರಾ.ಪಂ.ಅಭಿಯಾನ

0

ಬೆಂಗಳೂರು:ರಾಜ್ಯದ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ನ.14ರಿಂದ ಜ.24ರವರೆಗೆ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ನಡೆಸಲು `ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ’ಯನ್ನು ಆರಂಭಿಸುವಂತೆ ಸರಕಾರ ಆದೇಶವನ್ನು ಹೊರಸಿಡಿದೆ.
ಶಾಲಾ ಮಕ್ಕಳ ಅಭಿವೃದ್ಧಿಯ ಅಂಶಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹಾಗೂ ಮಕ್ಕಳ ಸ್ನೇಹಿ ಮತ್ತು ಮಕ್ಕಳ ಸುರಕ್ಷಿತ ಪಂಚಾಯತ್ ಗಳನ್ನಾಗಿಸಲು ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನವನ್ನು ಆರಂಭಿಸಲಾಗಿದೆ.ಈ ಅಭಿಯಾನದ ಅಂಗವಾಗಿ ಒಂದು ದಿನ ಮಕ್ಕಳ ಗ್ರಾಮ ಸಭೆಯನ್ನು ನಡೆಸಲು ಸುತ್ತೋಲೆಯನ್ನು ಶಿಕ್ಷಣ ಇಲಾಖೆ ಹೊರಡಿಸಿದೆ.
ಸ್ಥಳೀಯ ಸಮುದಾಯ, ಗ್ರಾಮಸ್ಥರು ಮತ್ತು ಅಧಿಕಾರೇತರರ ಸಹಕಾರದೊಂದಿಗೆ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಸಹಕಾರದೊಂದಿಗೆ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಹಾಗೂ ಅಧೀನ ಕಚೇರಿ ವ್ಯಾಪ್ತಿಗೆ ಬರುವ ಎಲ್ಲ ಅಧಿಕಾರಿಗಳು, ಮುಖ್ಯ ಶಿಕ್ಷಕರುಗಳು ಕೋವಿಡ್ ಸುರಕ್ಷತಾ ಕ್ರಮವನ್ನು ಅನುಸರಿಸಿ, ಅಭಿಯಾನದಲ್ಲಿ ಭಾಗವಹಿಸಬೇಕು.ಹಾಗೆಯೇ ಅಭಿಯಾನದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅಗತ್ಯ ನೆರವು ಸಹಕಾರವನ್ನು ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here