ದ.ಕ.ಜಿಲ್ಲೆಯ ಸಹಕಾರ ಬ್ಯಾಂಕ್ ಗಳು ಸದೃಢವಾಗಿದ್ದು, ಸಹಕಾರ ತತ್ವದಲ್ಲಿ ಜನರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ ಎಂದು ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಪೊಳಲಿ ವ್ಯವಸಾಯ ಸೇವಾ ಸಹಕಾರ ಸಂಘ (ನಿ.) ಪೊಳಲಿ ಇದರ ಬೆಂಜನಪದವು ಶಾಖೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಟಿ.ಜೆ.ರಾಜಾರಾಂ ಭಟ್ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿದ್ದರು .
ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿರ್ದೇಶಕ ಸುಧೀರ್ ಕುಮಾರ್ ಭದ್ರತಾ ಕೊಠಡಿ ಉದ್ಘಾಟಿಸಿದರು.
ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಗೋಪಾಲಕೃಷ್ಣ ಭಟ್ ಠೇವಣಿ ಪತ್ರ ಬಿಡುಗಡೆಗೊಳಿಸಿದರು.
ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ,ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್, ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷ ವಾಮನ ಆಚಾರ್ಯ, ಕರಿಯಂಗಳ ಗ್ರಾ.ಪಂ.ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ , ಸಹಕಾರ ಅಭಿವೃದ್ಧಿ ಅಧಿಕಾರಿ ಗೋಪಾಲ ಎನ್.ಜೆ. ಪೊಳಲಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಪಿ.ವೆಂಕಟೇಶ ನಾವಡ, ನಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯರವಿ ಫರ್ನಾಂಡಿಸ್ , ನಿರ್ದೇಶಕ ರುಗಳಾದ ಅಬುಬಕ್ಕರ್ ಡಿ.ವಿ, ಕರುಣಾಕರ ಆಳ್ವ, ದೇವದಾಸ್ ಹೆಗ್ಡೆ, ಯಶವಂತ ಪೂಜಾರಿ, ಕರಿಯದ, ಗೋಪಾಲ ಅಂಚನ್, ವಾಮನ ಪೂಜಾರಿ, ನಿರಂಜನಿ ಸಿ.ಶೆಟ್ಟಿ, ಜಯಂತಿ, ಕೇಶವ ಕಿಣಿ, ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.