ಪುತ್ತೂರು: ಡಾ. ದಯಾನಂದ ಪೈ,ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮಂಗಳೂರು ವಿಶ್ವವಿದ್ಯಾನಿಲಯ, ಕರ್ನಾಟಕ ಯಕ್ಷಭಾರತಿ ಪುತ್ತೂರು ಮತ್ತು ಯಕ್ಷಾಂಗಣ ಮಂಗಳೂರು ಇದರ ಆಶ್ರಯದಲ್ಲಿ ನ. 21 ರಿಂದ ನಡೆಯುತ್ತಿರುವ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಸಮಾರೋಪ ಹಾಗೂ ದೇಶಭಕ್ತ ಎನ್. ಎಸ್. ಕಿಲ್ಲೆ ಸ್ಮಾರಕ ಯಕ್ಷಾಂಗಣ ಪ್ರಶಸ್ತಿ ಪ್ರದಾನ ಸಮಾರಂಭ ನ. 27 ರಂದು ಸಂಜೆ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ದೀಪ ಪ್ರಜ್ವಲಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ರವರು ಹಿರಿಯ ಯಕ್ಷಗಾನ ಕಲಾವಿದ ಎಂ.ಕೆ. ರಮೇಶ್ ಆಚಾರ್ಯರಿಗೆ ಪ್ರಶಸ್ತಿ ಪ್ರದಾನ ನಡೆಸಲಿದ್ದಾರೆ. ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕ.ಸಾ.ಪ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಉದ್ಯಮಿ ಸೌಂದರ್ಯ ರಮೇಶ್,ಉದ್ಯಮಿ ಬಾಬು ಶೆಟ್ಟಿ ಪೆರಾರ, ಅಗರಿ ರಾಘವೇಂದ್ರ ರಾವ್, ವಿಜಯ ಕುಮಾರ್ ಶೆಟ್ಟಿ ಸಾಯಿ ಸಂಗಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದೇಶಭಕ್ತ ಎನ್.ಎಸ್. ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ ಕಿಲ್ಲೆ ಸೋದರಳಿಯ ಕಡಮಜಲು ಸುಭಾಸ್ ರೈಯವರ ಸಹಕಾರ ಮತ್ತು ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.