ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ| ಡಿ ವೀರೇಂದ್ರ ಹೆಗ್ಗಡೆ

0

ಧರ್ಮಸ್ಥಳ :  ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಜು 21 ರಂದು ದೆಹಲಿಯ ಸಂಸತ್ ಭವನದಲ್ಲಿ  ಕನ್ನಡದಲ್ಲಿ ದೇವರ ಹೆಸರಿನಲ್ಲಿ  ಪ್ರಮಾಣವಚನ ಸ್ವೀಕರಿಸಿದರು.

ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನೀಡಿರುವ ಅಪಾರ ಕೊಡುಗೆಯನ್ನು ಪುರಸ್ಕರಿಸಿ ಕೇಂದ್ರ ಸರಕಾರವು ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಮೂಲಕ ಅವರ ಸಮಾಜಮುಖಿ ಕೆಲಸಗಳಿಗೆ ಬಹುದೊಡ್ಡ ಗೌರವ ನೀಡಿದೆ.

LEAVE A REPLY

Please enter your comment!
Please enter your name here