ಬಂಟ್ವಾಳ: ವೀರಕಂಬ ಗ್ರಾಮ ಪಂಚಾಯತಿನಲ್ಲಿ ಮಹಿಳಾ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಡಿ.12ರಂದು ಜರಗಿತು. ಮಹಿಳಾ ಗ್ರಾಮ ಸಭೆಯ ನೋಡಲ್ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ರೇಣುಕಾ ಕಾರ್ಯಕ್ರಮ ನಡೆಸಿಕೊಟ್ಟರು. ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಸಮುದಾಯ ಸಂಘಟಕರಾದ ಚಂದ್ರಶೇಖರ್ ಹಾಗೂ ರವೀಶ್ ಜಲಜೀವನ್ ಮಿಷನ್ ಬಗ್ಗೆ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರದ ವಿದ್ಯಾ ಮಹಿಳಾ ಇಲಾಖೆಯಲ್ಲಿರುವ ವಿವಿಧ ಯೋಜನೆಗಳ, ಹಾಗೂ ಇಲಾಖೆಯ ಸಾಂತ್ವಾನ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಕಾತರಿ ಯೋಜನೆಯಲ್ಲಿ ಮಹಿಳೆಯರ ಪಾಲುಗೊಳ್ಳುವಿಕೆ ಬಗ್ಗೆಮಾಹಿತಿ ಹಂಚಿಕೊಂಡರು ಸಭೆಯಲ್ಲಿ ಮಹಿಳಾ ಸಬಲೀಕರಣ ಆಗಬೇಕಾದರೆ ಮಹಿಳೆಯರಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಎಂದು ತಾರತಮ್ಯ ಮಾಡದೆ ಎಲ್ಲಾ ಮಹಿಳೆಯರಿಗೂ ಸಮಾನ ಅವಕಾಶ ನೀಡಬೇಕೆಂದು ನಿರ್ಣಯ ಮಾಡಬೇಕೆಂದು ಮಹಿಳಾ ಗ್ರಾಮಸ್ಥರು ಒತ್ತಾಯಿಸಿದರು.
ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶೀಲಾ ನಿರ್ಮಲ ವೆಗಸ್, ಪಂಚಾಯತ್ ಸದಸ್ಯರಾದ ಜನಾರ್ಧನ ಪೂಜಾರಿ, ರಘು ಪೂಜಾರಿ, ಅಬ್ದುಲ್ ರೆಹಮಾನ್,ಜಯಂತಿ ಜನಾರ್ಧನ್ , ಮೀನಾಕ್ಷಿ ಸುನಿಲ್, ಗೀತಾ ಜಯಶೀಲ ಗಾಂಭೀರ, ವೀರಕಂಬ ಗ್ರಾಮ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಸಂಜೀವಿನಿ ಒಕ್ಕೂಟದ ಸದಸ್ಯರು, ಮಹಿಳಾ ಗ್ರಾಮಸ್ಥರು ಉಪಸ್ಥಿತರಿದ್ದರು
ಏನ್.ಅರ್. ಎಲ್. ಎಂ. ಸದಸ್ಯರು ತಯಾರಿಸಿದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಈ ಸಂದರ್ಭದಲ್ಲಿ ಏರ್ಪಡಿಸಿದ್ದರು.