ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಇದರ ಕಲ್ಲಡ್ಕ ವಲಯದ ಕೆಲಿಂಜ ಒಕ್ಕೂಟದ ತ್ರೈಮಾಸಿಕ ಸಭೆಯು ದೇವಾಡಿಗ ಸಮುದಾಯ ಭವನ ಮಂಗಳಪದವು ಎಂಬಲ್ಲಿ ಒಕ್ಕೂಟದ ಅಧ್ಯಕ್ಷ ದಯಾನಂದ ಗೌಡ ಬಿ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ದೊರೆಯುವ ಸೌಲಭ್ಯಗಳಾದ ಮಾಶಾಸನ , ಸಹಾಯಧನ ಹಾಗೂ ನೀರಿನ ಹಾಸಿಗೆಯನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ರೋಹಿಣಿ, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳು, ಮಹಿಳಾ ದೌರ್ಜನ್ಯಗಳ ಬಗ್ಗೆ ಹಾಗೂ ಮಹಿಳಾ ಸಾಂತ್ವನ ಕೇಂದ್ರಗಳ ಬಗ್ಗೆ ಮಾಹಿತಿ ನೀಡಿದರು.
ಕಲ್ಲಡ್ಕ ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಗುಣ ಶೆಟ್ಟಿ ಯೋಜನೆಯ ಆದೇಶದ ಪ್ರಕಾರ ಎಲ್ಲಾ ಸದಸ್ಯರ ಬೆರಳಚ್ಚು ನೀಡುವುದು ಕಡ್ಡಾಯವಾಗಿದ್ದು ಹಾಗೂ ಬೆರಳಚ್ಚು ನೀಡುವುದರ ಅಗತ್ಯತೆಯ ಬಗ್ಗೆ ಸದಸ್ಯರಿಗೆ ಮನವರಿಕೆ ಮಾಡಿದರು. ಕೆಲಿಂಜ ಒಕ್ಕೂಟದ ಸೇವಾ ಪ್ರತಿನಿಧಿಯಾದ ರೇಣುಕಾ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.