ವಿಟ್ಲ: ಅಂಗವಿಕಲತೆ ಎನ್ನುವುದು ಶಾಪವಲ್ಲ. ಶರೀರದ ನರಗಳ ದೌರ್ಬಲ್ಯದಿಂದ ಅಥವಾ ಅಪಘಾತಗಳಿಂದ ಸಂಭವಿಸುವ ಸಮಸ್ಯೆಯಾಗಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಅವರು ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ವಿಕಲಚೇತನರ ಸಮನ್ವಯ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಕಲಚೇತನರಿಗೆ ಮಾಹಿತಿಯನ್ನು ನೀಡುವ ಉದ್ದೇಶದಿಂದ ಗ್ರಾಮ ಸಭೆಯನ್ನು ಆಯೋಜಿಸುತ್ತಿರುವುದು ಸ್ತುತ್ಯರ್ಹ. ಮಾಣಿ ಗ್ರಾಮ ಪಂಚಾಯತ್ ನಲ್ಲಿ ಕಳೆದ ಎರಡು ವರ್ಷದಿಂದ ವಿಕಲಚೇತನರಿಗೆ ದೊಡ್ಡ ಪ್ರಮಾಣದಲ್ಲಿ ಸಹಾಯವನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ನೋಡೆಲ್ ಅಧಿಕಾರಿಯಾಗಿ ಆಗಮಿಸಿದ್ದ ಗಿರೀಶ್ ರವರು ಮಾತನಾಡಿ, ಇಲಾಖೆಗಳಿಂದ ಸಿಗಬಹುದಾದ ಸವಲತ್ತುಗಳು ಮತ್ತು ಅವುಗಳಿಗೆ ಬೇಕಾದ ದಾಖಲೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.
ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ಸೀತಾ, ಸುಜಾತ, ಮಿತ್ರಾಕ್ಷಿ, ವಿಕಲಚೇತನರ ಇಲಾಖೆಯ ಗ್ರಾಮ ಸಂಯೋಜಕ ವಸಂತ ಶೆಟ್ಟಿ ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಗಿರಿಜಾ ಸ್ವಾಗತಿಸಿದರು. ಕಾರ್ಯದರ್ಶಿ ಭಾರತಿ ವಂದಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.