
ಮಂಗಳೂರು : ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಮಂಗಳೂರಿಗೆ ಆಗಮಿಸಿದ್ದಾರೆ. ಕಳೆದ ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಜನಿಕಾಂತ್ ಅಭಿಮಾನಿಗಳಿಗೆ ಕೈ ಬೀಸುತ್ತಾ ಖಾಸಗಿ ಕಾರೊಂದರಲ್ಲಿ ಅಜ್ಞಾತ ಸ್ಥಳಕ್ಕೆ ನಿರ್ಗಮಿಸಿದ್ದಾರೆ. ಮಂಗಳೂರಿನಲ್ಲಿ ಸಿನೆಮಾವೊಂದರ ಚಿತ್ರೀಕರಣಕೋಸ್ಕರ ಮಂಗಳೂರಿಗೆ ರಜನಿಕಾಂತ್ ಆಗಮಿಸಿದ್ದು ಈಗಾಗಲೇ ಶಿವರಾಜ್ ಕುಮಾರ್ ಕೂಡ ಚಿತ್ರತಂಡ ಸೇರಿಕೊಂಡಿದ್ದು ಪಿಳಿಕುಲದ ಗುತ್ತಿನ ಮನೆಯಲ್ಲಿ ಚಿತ್ರೀಕರಣ ನಡೆಯಲಿದೆ ಎನ್ನಲಾಗಿದೆ.











