ಕಾಸರಗೋಡು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಮಸೀದಿ ಕಟ್ಟಡ ತೆರವುಗೊಳಿಸುತ್ತಿದ್ದ ವೇಳೆ ಗೋಪುರ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದ ಘಟನೆ ಕಾಸರಗೋಡು ನುಳ್ಳಿ ಸಾತಿಯಲ್ಲಿ ನಡೆದಿದೆ. ಇದರಿಂದ ಹಲವು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಇದರಿಂದ ಕೆಲಕಾಲ ಅಗ್ನಿಶಾಮಕದಳ ಮತ್ತು ಕೆಎಸ್‌ಇಬಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತೆರವು ಕಾರ್ಯಾಚರಣೆ ನಡೆಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.