ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗುವುದು ಟ್ರಸ್ಟ್ ನ ಉದ್ದೇಶ: ರಮಾನಾಥ ರೈ
ವಿಟ್ಲ: ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ ಇವರ ಆಶ್ರಯದಲ್ಲಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಜೆ. ದಂತ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು.
ಮಾಜಿ ಸಚಿವರು, ಸಮೃದ್ಧಿ ಚಾರಿಟೇಬಲ್ ಟ್ರಸ್ಟಿನ ಗೌರವ ಮಾರ್ಗದರ್ಶಕರಾದ ಬೆಳ್ಳಿಪ್ಪಾಡಿ ರಮಾನಾಥ ರೈಯವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ, ಆರೋಗ್ಯ ಇನ್ನಿತರ ವಿಚಾರಗಳಲ್ಲಿ ಸಹಾಯ ಮಾಡುವುದು ಟ್ರಸ್ಟಿನ ಉದ್ದೇಶವಾಗಿದ್ದು ಇದರ ಅಭಿವೃದ್ಧಿ ಮತ್ತು ಬೆಳವಣಿಗೆಗಾಗಿ ಎಲ್ಲರೂ ಸಹಕರಿಸಬೇಕು ಮತ್ತು ಟ್ರಸ್ಟಿನ ಸದುಪಯೋಗವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು.
ಶಿಬಿರದ ಸಂಯೋಜಕ ಎ.ಜೆ.ಆಸ್ಪತ್ರೆಯ ನವೀನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಅಬ್ಬಾಸ್ ಆಲಿ, ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ಪೂಜಾರಿ, ಯುವ ವಿಭಾಗದ ಅಧ್ಯಕ್ಷ ಇಬ್ರಾಹಿಂ ನವಾಝ್, ಸ್ಥಳೀಯ ವೈದ್ಯ ಡಾ. ಮನೋಹರ ರೈ, ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾಗಿರುವ ಕಡೇಶಿವಾಲಯ ಸರ್ಕಾರಿ ಶಾಲೆಯ ವಿದ್ಯಾರ್ಥಿ ಯಶವಂತರವರನ್ನು ಸನ್ಮಾನಿಸಲಾಯಿತು
ಎ.ಜೆ.ಆಸ್ಪತ್ರೆಯ ವೈದ್ಯರಾದ ಡಾ.ಸ್ವಾತಿ ಮತ್ತು ಡಾ.ಶಿಲ್ಪ ರವರನ್ನು ಗೌರವಿಸಲಾಯಿತು.
ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿಗುತ್ತು, ಪ್ರಮುಖರಾದ ಜಗನ್ನಾಥ ಚೌಟ ಬದಿಗುಡ್ಡೆ, ಸಂತೋಷ್ ಶೆಟ್ಟಿ ಅರೆಬೆಟ್ಟು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಶಿಬಿರಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.
ಪಂಚಾಯತ್ ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಕುಶಲ.ಯಂ.ಪೆರಾಜೆ, ಶ್ರೀಧರ ರೈ ಕುರ್ಲೆತ್ತಿಮಾರು, ರಮಣಿ.ಡಿ.ಪೂಜಾರಿ, ಸುಜಾತಾ, ಪ್ರೇಮಾ, ಲಕ್ಷ್ಮಿ, ಪ್ರಮುಖರಾದ ರಾಜ್ ಕಮಲ್ ಹೆಗ್ಡೆ, ಸುಲೈಮಾನ್ ಸೂರಿಕುಮೇರು, ಸತೀಶ್ ಪೂಜಾರಿ ಬಾಕಿಲ, ಅಶೋಕ್ ಪೂಜಾರಿ ಬರಿಮಾರು, ಶರತ್ ಶೆಟ್ಟಿ ಕಾಪಿಕಾಡು, ದಯಾನಂದ ಪೂಜಾರಿ, ಗಿರೀಶ್ ಪೂಜಾರಿ, ಮಾಣಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ ಟ್ರಸ್ಟಿನ ನಿರ್ದೇಶಕರಾದ ಬಾಲಕೃಷ್ಣ ಅಂಚನ್, ಡೆಂಝಿಲ್ ನೊರೋನ್ಹಾ, ಪ್ರವೀಣ್ ಡಿ’ಸೋಜಾ ಮೊದಲಾದವರು ಭಾಗವಹಿಸಿದ್ದರು.
ಟ್ರಸ್ಟಿನ ಅಧ್ಯಕ್ಷ ನಿವೃತ್ತ ಶಿಕ್ಷಕ ರಮೇಶ್ ನಾಯಕ್ ಸಿದ್ಧಕಟ್ಟೆ ಸ್ವಾಗತಿಸಿದರು. ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.