ಸಜಿಪಮುನ್ನೂರು ಆಲಾಡಿ ಜಾಕ್ ವೆಲ್ ಗೆ ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಭೇಟಿ

0

ಬಂಟ್ವಾಳ: ಮಂಗಳೂರು ಕ್ಷೇತ್ರ ಹಾಗೂ ಬಂಟ್ವಾಳ ಕ್ಷೇತ್ರದ ಹಲವು ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಯ ಪೈಪ್ ಲೈನ್ ಕಾಮಗಾರಿ ವಿಳಂಬನ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಸಜೀಪ ಮುನ್ನೂರು ಗ್ರಾ.ಪಂ. ವ್ಯಾಪ್ತಿಯ ಆಲಾಡಿಯಲ್ಲಿ ನಿರ್ಮಾಣ ಗೊಂಡಿರುವ ಜಾಕ್ ವೆಲ್ ಗೆ ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಭೇಟಿ ನೀಡಿ ಅಧಿಕಾರಿಗಳು ಹಾಗೂ ಗ್ರಾ.ಪಂ.ಸದಸ್ಯರ ಜೊತೆ ಸಮಾಲೋಚನೆ ನಡೆಸಿದರು.

ಈ ವೇಳೆ ಸಜೀಪ ಮುನ್ನೂರು ಸೇರಿದಂತೆ 5 ಗ್ರಾ.ಪಂ.ವ್ಯಾಪ್ತಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ 279 ಕೋಟಿ ರೂ ಗಳು ಮಂಜೂರಾಗಿದ್ದು, ಅದರ ಅನುಷ್ಠಾನ ವಿಳಂಬವಾಗುವುದರಿಂದ , ಈ ಗ್ರಾಮದ ಜನತೆಗೆ ಕುಡಿಯುವ ನೀರು ತತಕ್ಷಣ ನೀಡಲು ಕರೋಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಿಂದ ನೀರು ಶುದ್ದೀಕರಣಕ್ಕಾಗಿ ಪಿಲ್ಟರ್ ಅಳವಡಿಸಿ, 0.2 ಎಂ.ಎಲ್.ಡಿ. ನೀರನ್ನು ಸಜೀಪ ಮುನ್ನೂರು ಗ್ರಾಮಕ್ಕೆ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಉಳ್ಳಾಲ ಹಾಗೂ ಬಂಟ್ವಾಳದ ಹಲವು ಗ್ರಾಮಗಳಿಗೆ ನೀರನ್ನು ಒದಗಿಸುವ ಕಚ್ಚಾನೀರು ಹಾಗೂ ಶುದ್ದೀಕರಣ ದ ನೀರಿನ ಪೈಪ್ ಲೈನ್ , ಅಳವಡಿಕೆ ಗೆ ಅನುಮತಿ ನೀಡಲು ಗ್ರಾ.ಪಂ ಅಧಿಕಾರಿಗಳಿಗೆ ಸೂಚಿಸಿದರು.


ಸತತ ಎರಡು ವರ್ಷಗಳ ಕಾಲ ಹೋರಾಟ ಮಾಡಿ, 279 ಕೋಟಿ ರೂ ಗಳ ಯೋಜನೆ ಮಂಜೂರು ಮಾಡಿಸಲಾಗಿದೆ, ಇದು ಬಂಟ್ವಾಳ ದ ಐದು ಗ್ರಾ.ಪಂ ಗಳಿಗೆ ಶಾಶ್ವತ ನೀರಿನ ಯೋಜನೆ ಯಾಗಿದೆ . ಆದರೆ ತತಕ್ಷಣದ ಪರಿಹಾರಕ್ಕಾಗಿ ಕೊಳವೆ ಬಾವಿ ಕೊರೆದರು ನೀರು ಸಿಗದೆ ಇರುವದುದರಿಂದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸಚಿವರನ್ನು ಸ್ಥಳಕ್ಕೆ ಕರೆಯಿಸಿ, ಗ್ರಾ.ಪಂ.ಅಧ್ಯಕ್ಷ ರು ಹಾಗೂ ಸದಸ್ಯರ ಎದುರಿನಲ್ಲಿ, ಮಾತುಕತೆ ನಡೆಸಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ತಿಳಿಸಿದ್ದಾರೆ.


ಸಚಿವರು ಹಾಗೂ ಶಾಸಕರು ಅಧಿಕಾರಿಗಳ ಜೊತೆ ಮುಡಿಪುವಿನಲ್ಲಿ ನಿರ್ಮಾಣ ಗೊಂಡಿರುವ ಶುದ್ದೀಕರಣ ಘಟಕಕ್ಕೆ ಬೇಟಿ ಪರಿಶೀಲನೆ ನಡೆಸಿದ್ದು
ಈ ಸಂದರ್ಭದಲ್ಲಿ ಗ್ರಾ.ಪಂ‌.ಅಧ್ಯಕ್ಷೆ ಸಬೀನಾ, ಗ್ರಾಮದ ಪ್ರಮುಖರಾದ ಶ್ರೀಕಾಂತ್ ಶೆಟ್ಟಿ ಸಜೀಪ, ಸಂತೋಷ್ ಶೆಟ್ಟಿ ದಳಂದಿಲ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಕಾರ್ಯಪಾಲಕ ಅಭಿಯಂತರರು ಚಂದ್ರಶೇಖರ, ಸಹಾಯಕ ಇಂಜಿನಿಯರ್ ಶೋಭಾಲಕ್ಮೀ, ಎ.ಇ.ಇ. ಜಿ.ಕೆ.ನಾಯ್ಕ್ , ಸಹಾಯಕ ಇಂಜಿನಿಯರ್ ಜಗದೀಶ್ ನಿಂಬಾಲ್ಕರ್, ಇ.ಒ.ರಾಜಣ್ಣ, ಸಜೀಪ ಮುನ್ನೂರು ಪಿಡಿಒ ಲಕ್ಷಣ್, ಸಜೀಪ ಮೂಡ ಪಿ.ಡಿಒ ಮಾಯಕುಮಾರಿ, ಕಂದಾಯ ನಿರೀಕ್ಷಕಿ ಸ್ವಾತಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here