ಬಂಟ್ವಾಳ : ಆರ್ಥಿಕ ವ್ಯವಸ್ಥೆಯಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಭಾರತ ದೇಶ ಬಲಿಷ್ಠವಾಗಿದ್ದು, ಜನರು ಯಾವುದೇ ಚಿಂತೆಯಿಲ್ಲದೆ ನೆಮ್ಮದಿಯಿಂದ ಜೀವನ ಮಾಡಲು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಿಂದ ಸಾಧ್ಯವಾಯಿತು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಅವರು ಪಂಜಿಕಲ್ಲು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ರೂ.14 ಕೋಟಿಗೂ ಮಿಕ್ಕಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಬಳಿಕ ನಡೆದ ಕಾರ್ಯಕರ್ತರ ಸಮಾವೇಶದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು,ಮಾತನಾಡಿ ಬಂಟ್ವಾಳದಲ್ಲಿ ಬಿಜೆಪಿ ಶಾಸಕರು ಗೆಲುವು ಸಾಧಿಸಿದರೆ, ಹಿಂದೂ ಸಮಾಜ ಗೆದ್ದಂತೆ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಒಟ್ಟಾಗಿ ,ಒಗ್ಗಟ್ಟಿನಿಂದ ಕೆಲಸ ಮಾಡುವ ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜಯಶ್ರೀ ಪಟ್ರಾಡಿ, ಗ್ರಾ.ಪಂ.ಸದಸ್ಯ ರಾದ ಹರೀಶ್ ಪೂಜಾರಿ ತಾಕೋಡೆ, ಬಾಲಕೃಷ್ಣ ಪೂಜಾರಿ, ಮೋಹನ್ ದಾಸ್ , ಪೂವಪ್ಪ ಮೆಂಡನ್, ಚಿತ್ರಾಕ್ಷಿ, ರೂಪ, ನಳಿನಿ, ಚಂದ್ರಾವತಿ ಶೆಟ್ಟಿ, ಶೋಭಾ, ಗೋಪಾಲ ಕುಲಾಲ್ ಮಜಲೊಡಿ, ಚಿದಾನಂದ ಕುಲಾಲ್, ಸುಜಾತ, ಮಂಡಲದಕೋಶಾಧಿಕಾರಿ ಪ್ರಕಾಶ್ ಅಂಚನ್ , ಪಂಜಿಕಲ್ಲು ಶಕ್ತಿಕೇಂದ್ರದ ಸಂಚಾಲಕ ಲಕ್ಷೀನಾರಾಯಣ, ಮೂಡನಡುಗೋಡು ಶಕ್ತಿಕೇಂದ್ರದ ಸಂಚಾಲಕ ಹರೀಶ್ ,ಬುಡೋಳಿ ಶಕ್ತಿ ಕೇಂದ್ರದ ಸಂಚಾಲಕ ಶಿವರಾಮ ಪೂಜಾರಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯಶೋಧರ ಕರ್ಬೆಟ್ಟು, ರುಕ್ಮಯ ಪೂಜಾರಿ, ಪ್ರವೀಣ್ ಪೂಜಾರಿ, ಶರ್ಮಿತ್ ಜೈನ್ , ಕೆ.ಎನ್.ಶೇಖರ್, ವಿಕೇಶ್ ಬಾಲೇಶ್ವರ ಮತ್ತಿತರರು ಉಪಸ್ಥಿತರಿದ್ದರು.