ಪೋಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಮಂಗಳೂರಿಗೆ ಭೇಟಿ

0

ಪುತ್ತೂರು: ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ರವರು ಆ.1ರಂದು ಮಂಗಳೂರಿಗೆ ಭೇಟಿ ನೀಡಿ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಮಸೂದ್‌ ಮತ್ತು ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಹಾಗೂ ಮಂಗಳೂರು ಸುರತ್ಕಲ್‌ ನಲ್ಲಿ ನಡೆದ ಫಾಝಿಲ್‌ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಉದ್ವಿಗ್ನ ಸ್ಥಿತಿಯಲ್ಲಿರುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಮತ್ತು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯ ಕುರಿತು ಪ್ರವೀಣ್‌ ಸೂದ್‌ ಮಾಹಿತಿ ಪಡೆದುಕೊಂಡರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಷ್‌ ಸೋನಾವಣೆ, ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್‌ ಸಹಿತ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. 

LEAVE A REPLY

Please enter your comment!
Please enter your name here