ಕಾವಳಮೂಡೂರು ಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ

0

ಬಂಟ್ವಾಳ: ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿಯೂ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು,ಹಾಗಾಗಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರಿಗೆ ತಿಳಿಸಿ ಪಕ್ಷವನ್ನು ಮತ್ತೆ ಬಲಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.

ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಕಲಾಯಿ ಪ್ರವೀಣ್ ನಾಯಕ್ ಅವರ ಮನೆಯಲ್ಲಿ ನಡೆದ ಕಾವಳಮೂಡೂರು ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ಇನ್ನಷ್ಟು ಧಾರ್ಮಿಕ ಕ್ಷೇತ್ರಗಳ ಸಹಿತ ಸರ್ವ ರೀತಿಯ ಅಭಿವೃದ್ಧಿಗೆ ಮತ್ತೊಮ್ಮೆ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಾಸಕರಾಗಿ ಆಯ್ಕೆಯಾಗಿ ಬರಬೇಕು, ಈ ನಿಟ್ಟಿನಲ್ಲಿ ಕಾರ್ಯಕರ್ತರು ರಾಜೇಶ್ ನಾಯ್ಕ್ ಕ್ಷೇತ್ರದಲ್ಲಿ ಮಾಡಿದ ಜನಸೇವೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು. ಗ್ರಾಮಪಂಚಾಯತ್ ಅಧ್ಯಕ್ಷೆ ಜಯಲಕ್ಮೀ ದೇವಾಡಿಗ, ಉಪಾಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ,ನಾವೂರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಚಿದಾನಂದ ರೈ ಕಕ್ಯ, ಕ್ಷೇತ್ರದ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here