ಬಂಟ್ವಾಳ:ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(30)ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು. ಅನೇಕ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು.