ಮಾ.1: ಸಾಮೂಹಿಕ ವಿವಾಹ ನಿಶ್ಚಿತಾರ್ಥ

0

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನ 42ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ.8ರಂದು ನಡೆಯಲಿರುವ 18ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಮಾ.1ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಕ್ರೀಡಾಂಗಣದ ಸಭಾಂಗಣದಲ್ಲಿ ನಡೆಯಲಿದೆ.

ಈ ಬಾರಿ ಒಟ್ಟು 7 ಜೋಡಿಗಳಿಗೆ ವಿವಾಹ ನಡೆಯಲಿದ್ದು, ತುಳುನಾಡಿನ ಸಂಪ್ರದಾಯ ಪ್ರಕಾರ ನಿಶ್ಚಿತಾರ್ಥ ನಡೆಯಲಿದೆ. ಈ ಸಂದರ್ಭದಲ್ಲಿ ಭಾವಿ ವಧು-ವರರಿಗೆ ಮಂಗಳವಸ್ತ್ರವನ್ನು ವಿತರಿಸಲಾಗುವುದು. ಪುಂಜಾಲಕಟ್ಟೆ ಉದ್ಯಮಿ ಗಣೇಶ್ ಮೂಲ್ಯ ಅನಿಲಡೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ.ಅಮೀನ್ ಅಧ್ಯಕ್ಷತೆ ವಹಿಸಲಿದ್ದಾರೆ.. ಉದ್ಯಮಿ ಜಗನ್ನಾಥ ಶೆಟ್ಟಿ ಕೆದ್ದಳಿಕೆ ಮಂಗಳ ವಸ್ತ್ರ ವಿತರಿಸಲಿದ್ದಾರೆ. ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕ್ಲಬ್‌ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here