ದ.ಕ. ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಮಂಜೂರು

0

ಬಂಟ್ವಾಳ: ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮ ಹಾಗೂ ಬಂಟ್ವಾಳ ತಾಲೂಕಿನ ಮಾಣಿಗೆ ಬಜೆಟ್ ನಲ್ಲಿ ಹೊಸ ಪೊಲೀಸ್ ಠಾಣೆ ಮಂಜೂರಾಗಿದೆ. ಬೆಂಗಳೂರು, ಬೆಳಗಾವಿ, ಯಾದಗಿರಿ ಸೇರಿದಂತೆ 11 ಜಿಲ್ಲೆಗಳಿಗೆ ಒಟ್ಟು 12 ಹೊಸ ಪೊಲೀಸ್ ಠಾಣೆಗಳು ಮಂಜೂರಾಗಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ 2 ಪೊಲೀಸ್ ಠಾಣೆಗಳು ಮಂಜೂರಾಗಿದೆ.

ಹೊಸ ಠಾಣೆಗಳು ಮಂಜೂರಾಗಿರುವ ಸಜೀಪನಡು ಹಾಗೂ ಮಾಣಿ ಪ್ರದೇಶ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಟ್ಟಿತ್ತು. ಹೊಸ ಠಾಣೆ ನಿರ್ಮಾಣವಾದ ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಹೊರೆ ಕಡಿಮೆಯಾಗಲಿದೆ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here