ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್ – ಬಿ ರಮಾನಾಥ ರೈ

0

ಬಂಟ್ವಾಳ: ಕರ್ನಾಟಕ ಸರ್ಕಾರ ಮಂಡಿಸಿದ ಇಂದಿನ ಬಜೆಟ್ ಜನಪರ ಮತ್ತು ಅಭಿವೃದ್ಧಿ ಪರವಾಗಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರಿಗೆ ನೀಡಿದ ಯೋಜನೆಗಳು ಸ್ವಾಗತಾರ್ಹವಾಗಿವೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಪ್ರತಿಕ್ರಿಯಿಸಿದ್ದಾರೆ.

ಕರಾವಳಿ ಪ್ರದೇಶದ ಪ್ರವಾಸೋದ್ಯಮ, ಮೀನುಗಾರಿಕೆ, ಪೊಲೀಸ್ ಠಾಣೆಗಳ ಬಲವರ್ಧನೆ, ಕೃಷಿ, ಅರಣ್ಯ, ಆರೋಗ್ಯ, ಮುಜರಾಯಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ, ವಸತಿ , ಶಿಕ್ಷಣ ಕ್ಷೇತ್ರಕ್ಕೆ ಸೇರಿದಂತೆ ಎಲ್ಲಾ ವರ್ಗದ ಸಮುದಾಯದ ಕಲ್ಯಾಣಕ್ಕಾಗಿ ವಿಶೇಷ ಆದ್ಯತೆ ಸಂತಸದ ಸಂಗತಿಯಾಗಿದೆ. ರಾಜ್ಯದ ಸಮಗ್ರ ಹಾಗೂ ಕರಾವಳಿ ಅಭಿವೃದ್ಧಿಗೆ ಈ ಬಜೆಟ್ ಮಹತ್ವದ ಹೆಜ್ಜೆಯಾಗಿದೆ ಎಂದು ರಮಾನಾಥ ರೈ ತಿಳಿಸಿದ್ದಾರೆ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here