ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಶಿಕ್ಷೆ ಪ್ರಕಟ

0

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಬೂಬಕ್ಕರ್ ಎಂಬಾತನಿಗೆ ದೋಷಿ ಎಂದು ತೀರ್ಮಾನಿಸಿ 20 ವರ್ಷ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ವಿಧಿಸಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿತ ಅಬೂಬಕ್ಕರ್‌ (50) ಎಂಬಾತನ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ನಡೆಸಿದ ಆಗಿನ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ನಿರೀಕ್ಷಕ ಶಿವಕುಮಾರ ಬಿ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಆರೋಪಿಯ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.


ಪ್ರಕರಣವು ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲದಲ್ಲಿ ವಿಚಾರಣೆ ನಡೆದು ಆರೋಪಿಯನ್ನು ದೋಷಿ ಎಂಬುದಾಗಿ ಆದೇಶಿಸಿದೆ. ಪ್ರಕರಣದಲ್ಲಿ ಸಹನದೇವಿ ರವರು ವಿಶೇಷ ಸರಕಾರಿ ಅಭಿಯೋಜಕರಾಗಿ ವಾದ ಮಂಡಿಸಿದ್ದು, ಪ್ರಕರಣದ ತನಿಖಾ ಸಹಾಯಕರಾಗಿ ಬಂಟ್ವಾಳ ಗ್ರಾಮಾಂತರ ಠಾಣಾ ಹೆಚ್ ಸಿ ಪ್ರಶಾಂತ್ ಕುಮಾರ್ ಹಾಗೂ ನ್ಯಾಯಾಲಯ ಕರ್ತವ್ಯ ಸಿಬ್ಬಂದಿಯಾಗಿ ಸಂತೋಷ ಡಿ ಜಾಧವ್ ಸಹಕರಿಸಿದ್ದಾರೆ.

LEAVE A REPLY

Please enter your comment!
Please enter your name here