ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೇರಳದ ಮೂಲದ ವಾರೆಂಟ್ ಆರೋಪಿ ಎರ್ನಾಕುಲಂ ಜಿಲ್ಲೆಯ ಕುಟ್ಟಿಂಚಾಲ್ ನಿವಾಸಿ ಪ್ರಿನ್ಸ್ ಟಿ.ಜೆ.ಜೋಶ್(43) ಯನ್ನು ಕುಟ್ಟಂಪುಝದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಕಾರ್ಯಾಚರಣೆಯಲ್ಲಿ ಬಂಟ್ವಾಳ ಎ.ಎಸ್.ಪಿ ಯಶ್ ಕುಮಾರ್ ಶರ್ಮಾ ಅವರ ನಿರ್ದೇಶನದಂತೆ ಗ್ರಾಮಾಂತರ ಠಾಣಾ ಪಿ.ಎಸ್.ಐ ಮಂಜುನಾಥ ಟಿ. ಅವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿ ಸಂತೋಷ್, ಶಿವಾನಂದ ಮಡ್ಡಿ ಪಾಲ್ಗೊಂಡಿದ್ದರು.








