ಬಂಟ್ವಾಳ: ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏ.19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2026ರ ಲೋಗೋವನ್ನು ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹಾಗೂ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅನಾವರಣಗೊಳಿಸಿದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಡೆನ್ನನ ಪ್ರಧಾನ ಸಂಚಾಲಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಜೊತೆ ಕಾರ್ಯದರ್ಶಿ ಆನಂದ ಶಂಭೂರು, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಪ್ರಥಮ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್, ಸುರೇಶ್ ಪೂಜಾರಿ, ಕೋಶಾಧಿಕಾರಿ ಸತೀಶ್ ಕಿಲ್ಪಾಡಿ, ಸಮಾವೇಶ ನಿರ್ದೇಶಕ ಅಜಿತ್ ಪಾಲೇರಿ, ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಸಂಘಟನಾ ಕಾರ್ಯದರ್ಶಿ ನಾಗೇಶ್ ಪೂಜಾರಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮದ್ವ, ಕೋಶಾಧಿಕಾರಿ ನವೀನ್ ಪೂಜಾರಿ ಲೊರೆಟ್ಟೋ, ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಡೆನ್ನಾನ ಸಂಚಾಲಕರಾದ ಉದಯ ಪೂಜಾರಿ ಮೇನಾಡು, ಸತೀಶ್ ಪೂಜಾರಿ ಬಾಯಿಲ, ಸಲಹೆಗಾರರಾದ ರಾಮಚಂದ್ರ ಸುವರ್ಣ ತುಂಬೆ, ಮಾಜಿ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿ, ನಿರೂಪಿಸಿದರು.








