ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾದ ಘಟನೆ ವೀರಕಂಬ ಬಳಿ ನಡೆದಿದೆ.
ಕಲ್ಲಡ್ಕ ಕಡೆಯಿಂದ ಕೆಲಿಂಜ ಭಾಗಕ್ಕೆ ಬರುತ್ತಿದ್ದ ಕಾರು ವೀರಕಂಬ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಚಾಲಕ ಸೇರಿ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.








