ಬಂಟ್ವಾಳ: 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣವೊಂದಕ್ಕೆ ಸಂಬಂಧಿಸಿ ಕೇರಳ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತ 8 ವರ್ಷದಿಂದ ತಲೆಮರೆಸಿಕೊಂಡಿದ್ದ. ಮಾ.16 ರಂದು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಗಳಾದ ಸಂತೋಷ್, ಶಿವಾನಂದ ಮಡ್ಡಿ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ತಮಿಳುನಾಡು ರಾಜ್ಯದ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.








