ಎ.4: ಆತ್ಮಿ ಶೆಟ್ಟಿ ಭರತನಾಟ್ಯ ರಂಗಪ್ರವೇಶ

0

ಬಂಟ್ವಾಳ: ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ) ಕಲ್ಲಡ್ಕ, ಭರತನಾಟ್ಯ ಸಂಸ್ಥೆಯ ನಿರ್ದೇಶಕರಾದ ವಿದ್ಯಾ ಮನೋಜ್ ಅವರ ಶಿಷ್ಯೆ ಆತ್ಮಿ ಶೆಟ್ಟಿ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು ಏ.04ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಸಂಜೆ 5.15 ಗಂಟೆಗೆ ನೆರವೇರಲಿದೆ ಎಂದು ವಿದ್ಯಾಮನೋಜ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆತ್ಮಿ ಶೆಟ್ಟಿ ಅವರು 12 ವರ್ಷಗಳಿಂದ ಗುರುಗಳಾದ ವಿದುಷಿ ವಿದ್ಯಾ ಮನೋಜ್ ಅವರ ಬಳಿ ಭರತನಾಟ್ಯ ಅಭ್ಯಾಸವನ್ನು ಮಾಡುತ್ತಿದ್ದು, ವಿದ್ವತ್ ಅಂತಿಮ ಪರೀಕ್ಷೆಯ ತಯಾರಿಯಲ್ಲಿದ್ದಾರೆ. ಹಲವು ಪ್ರತಿಷ್ಠಿತ ವೇದಿಕೆಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದು, ಜನಮನ್ನಣೆಯನ್ನು ಗಳಿಸಿರುವಂತಹ ಉದಯೋನ್ಮುಖ ಕಲಾವಿದೆ.

ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ ಅಂಡ್ ಕಲ್ಚರ್, ಪುತ್ತೂರು ಭರತನಾಟ್ಯ ಸಂಸ್ಥೆಯ ನಿರ್ದೇಶಕರಾದ ಕರ್ನಾಟಕ ಕಲಾಶ್ರೀ ಗುರು ವಿದುಷಿ ನಯನ ವಿ ರೈ, ನೃತ್ಯಗಿರಿ ಮೈಸೂರು ಭರತನಾಟ್ಯ ಸಂಸ್ಥೆಯ ನಿರ್ದೇಶಕರಾದ ಡಾ. ಕೃಪಾ ಪಡ್ಕೆ, ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರಿನ ಸ್ಥಾಪಕರಾದ ಪಟ್ಲಗುತ್ತು ಸತೀಶ್ ಶೆಟ್ಟಿ, ಹೋಟೆಲ್ ರಂಗೋಲಿಯ ಉದ್ಯಮಿಗಳಾದ ಚಂದ್ರಹಾಸ ಡಿ ಶೆಟ್ಟಿ ಭಾಗವಹಿಸಲಿದ್ದಾರೆ.

ಹಿಮ್ಮೇಳ ಕಲಾವಿದರಾಗಿ ನಟುವಾಂಗದಲ್ಲಿ ಗುರು ವಿದುಷಿ ವಿದ್ಯಾ ಮನೋಜ್, ಹಾಡುಗಾರಿಕೆಯಲ್ಲಿ ವಿದ್ವಾನ್ ನಂದಕುಮಾರ್ ಉನ್ನಿಕೃಷ್ಣನ್ ಬೆಂಗಳೂರು, ಮೃದಂಗ ವಾದನದಲ್ಲಿ ವಿದ್ವಾನ್ ಕಾರ್ತಿಕ್ ವೈದಾತ್ರಿ ಬೆಂಗಳೂರು, ಕೊಳಲು ವಾದನದಲ್ಲಿ ವಿದ್ವಾನ್ ನಿತೀಶ್ ಅಮ್ಮಣ್ಣಾಯ ಬೆಂಗಳೂರು, ವೀಣಾ ವಾದನದಲ್ಲಿ ವಿದ್ವಾನ್ ಗೋಪಾಲ್ ವೆಂಕಟರಮಣ ಬೆಂಗಳೂರು ಸಹಕರಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಲಾವಿದೆಯ ತಂದೆ ಉದಯ ಶೆಟ್ಟಿ, ತಾಯಿ ಶಾಲಿನಿ ಯು. ಶೆಟ್ಟಿ, ಮಾವ ಸಂತೋಷ್ ಉಪಸ್ಥಿತರಿದ್ದರು.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here