ಬಂಟ್ವಾಳ: ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026ರ ಶೀರ್ಷಿಕೆ ಹಾಡನ್ನು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅವರು ಈ ಹಾಡು ಬಿಡುಗಡೆಗೊಳಿಸಿ ಮಾತನಾಡಿ, ಯುವವಾಹಿನಿಯ ಡೆನ್ನಾನ ಕಾರ್ಯಕ್ರಮ ಅದ್ಭುತ ಯಶಸ್ಸು ಸಾಧಿಸಲಿದೆ. ಸದಸ್ಯರ ಅವಿರತ ಶ್ರಮಕ್ಕೆ ತಕ್ಕ ಫಲ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯುವವಾಹಿನಿಯ 35 ಘಟಕಗಳಲ್ಲಿ ಪ್ರತಿಷ್ಠಿತ ಘಟಕವಾಗಿ ಗುರುತಿಸಿಕೊಂಡಿರುವ ಬಂಟ್ವಾಳ ಘಟಕವು ಸೃಜನಶೀಲತೆ, ಕ್ರಿಯಾಶೀಲತೆ ಹಾಗೂ ಹೊಸತನದಲ್ಲಿ ಎಲ್ಲರಿಗೂ ಮಾದರಿಯಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ವಹಿಸಿದ್ದರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಡೆನ್ನಾನ ಸಂಚಾಲಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ರಕ್ತೇಶ್ವರೀ ದೇವಿ ದೇವಸ್ಥಾನದ ಟ್ರಸ್ಟಿ ವಿಶ್ವಾನಾಥ ಬಿ, ಬಂಟ್ವಾಳ ಉಪ ತಹಶೀಲ್ದಾರ್ ನವೀನ್ ಕುಮಾರ್, ವಕೀಲ ಚಿದಾನಂದ ಕಡೇಶಿವಾಲಯ, ತುಂಬೆ ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಸುರೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ, ಸಾಂಸ್ಕೃತಿಕ ನಿರ್ದೇಶಕ ದಿನೇಶ್ ಸುವರ್ಣ ರಾಯಿ, ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಸಾಮಾಜಿಕ ಜಾಲತಾಣ ಸಂಪಾದಕ ಮಂಡಳಿ ಸದಸ್ಯೆ ಭವಾನಿ ಕೆ, ಸಂಘಟನಾ ಕಾರ್ಯದರ್ಶಿ ನಾಗೇಶ್ ಪೂಜಾರಿ ಮಾಣಿ, ನಿರಂಜನ್ ಬಜಪೆ ನಾಮ ನಿರ್ದೇಶನ ಸದಸ್ಯ ನವೀನ್ ಕಾರಾಜೆ, ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮದ್ವ, ಜೊತೆ ಕಾರ್ಯದರ್ಶಿ ಲೋಹಿತ್ ಕನಪಾದೆ, ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಕುಚ್ಚಿಗುಡ್ಡೆ, ಡೆನ್ನಾನ ಸಹ ಸಂಚಾಲಕರಾದ ಸತೀಶ್ ಬಾಯಿಲ, ಉದಯ ಮೇನಾಡು, ಮಲ್ಲಿಕಾ ಪಚ್ಚಿನಡ್ಕ, ಸತೀಶ್ ಪೂಜಾರಿ ಕೊಪ್ಪರಿಗೆ ಮಾಜಿ ಅಧ್ಯಕ್ಷ ಬಿ ಶ್ರೀಧರ್ ಅಮೀನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.








