ಸಜಿಪಮುನ್ನೂರು: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ, ಮಹಿಳೆ ಗಂಭೀರ

0


ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾದ ಘಟನೆ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಮಾರಣಗುಳಿಗ ಬನದ ಬಳಿ ನಡೆದಿದೆ.


ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂದು ಗುರುತಿಸಲಾಗಿದೆ.


ಭಾರತಿ ಅವರು ಮಗಳಾದ ದೀಪಶ್ರೀ ಎಂಬವರೊಂದಿಗೆ ಮಾ.30ರಂದು ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ಗುಳಿಗಜ್ಜ ಕಟ್ಟೆಗೆ ಹಣ ಹಾಕುವ ಸಲುವಾಗಿ ಬೆಳಿಗ್ಗೆ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಿ ಹೆದ್ದಾರಿ ರಸ್ತೆಯ ಅಂಚಿಗೆ ತಲುಪಿದಾಗ ಮೆಲ್ಕಾರ್ ಕಡೆಯಿಂದ ಮುಡಿಪು ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here