ನೀಟ್ ಯುಜಿ (NEET-UG) ಮರುಪರೀಕ್ಷಾ ದಿನಾಂಕ ಪ್ರಕಟ

0

ಬಂಟ್ವಾಳ: ಮೇ.3 ರಂದು ನಡೆದಿದ್ದ ನೀಟ್ ಯುಜಿ (NEET-UG) 2026ರ ಪರೀಕ್ಷೆ ರದ್ದಾದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮರು ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಶುಕ್ರವಾರ(ಮೇ 15) ಈ ಬಗ್ಗೆ ಆದೇಶ ಹೊರಡಿಸಿದ್ದು, ಜೂನ್ 21 ರಂದು ದೇಶಾದ್ಯಂತ ಮರುಪರೀಕ್ಷೆ ನಡೆಸುವುದಾಗಿ ತಿಳಿಸಿದೆ.

ಈ ಮೊದಲು ನಡೆದಿದ್ದ ನೀಟ್ ಪರೀಕ್ಷೆಯು ರದ್ದಾದ ನಂತರ ವೈದ್ಯಕೀಯ ಸೀಟಿಗಾಗಿ ಹಂಬಲಿಸುತ್ತಿದ್ದ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿತ್ತು. ಈ ಬಗ್ಗೆ ಸರ್ಕಾರದಿಂದ ಅನುಮೋದನೆ ಪಡೆದಿರುವ ಎನ್‌ಟಿಎ, ತನ್ನ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯ ಮೂಲಕ ಜೂನ್ 21, ರವಿವಾರದಂದು ಪರೀಕ್ಷೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here