ಸರ್ವರ್ ಸಮಸ್ಯೆಯಿಂದ ಪಡಿತರ ಅಕ್ಕಿ ವಿತರಣೆಯಲ್ಲಿ ವ್ಯತ್ಯಯ – ಸಮಸ್ಯೆ ನಿವಾರಣೆಗೆ ಒತ್ತಾಯ

0

ಬಂಟ್ವಾಳ: ಆಹಾರ, ನಾಗರಿಕ ಸರಬರಾಜು ಇಲಾಖೆಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆಯಾಗುತ್ತಿರುವ ಪಡಿತರ ಅಕ್ಕಿ ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರಿಗೆ ಸರಿಯಾಗಿ ತಲುಪುತ್ತಿಲ್ಲ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಅವರು, “ಸರ್ವರ್ ತೊಂದರೆಯಿಂದ ಗ್ರಾಹಕರು ತಮ್ಮ ಪಡಿತರ ಅಕ್ಕಿ ಪಡೆಯಲು ನ್ಯಾಯಬೆಲೆ ಅಂಗಡಿಗಳಲ್ಲಿ ದಿನಪೂರ್ತಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವೆಡೆ ದಿನಪೂರ್ತಿ ಕಾದರೂ ಅಕ್ಕಿ ಸಿಗದೆ ವಾಪಸ್ ಹೋಗುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಸರ್ಕಾರದ ಮಟ್ಟದ ತಾಂತ್ರಿಕ ಅಡಚಣೆಯಿಂದ ಕೂಲಿ ಕೆಲಸ ಮಾಡುವ ಬಿಪಿಎಲ್ ಪಡಿತರ ಚೀಟಿದಾರರು ಸಕಾಲದಲ್ಲಿ ಅಕ್ಕಿ ಸಿಗದೆ ನ್ಯಾಯಬೆಲೆ ಅಂಗಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಅಧಿಕಾರಿಗಳನ್ನು ವಿಚಾರಿಸಿದರೆ ಎರಡು ತಿಂಗಳ ಅಕ್ಕಿಯನ್ನು ಒಂದೇ ತಿಂಗಳಲ್ಲಿ ನೀಡುತ್ತಿರುವುದರಿಂದ ಸರ್ವರ್ ಸಮಸ್ಯೆ ಎಂದು ಉತ್ತರಿಸುತ್ತಿದ್ದು, ಸಮರ್ಪಕ ಕಾರಣ ತಿಳಿಯುತ್ತಿಲ್ಲ” ಎಂದು ಅವರು ದೂರಿದ್ದಾರೆ. “ಈ ಸರ್ವರ್ ಸಮಸ್ಯೆ ತಿಂಗಳ ಅಂತ್ಯದವರೆಗೂ ಮುಂದುವರಿದರೆ ಕೆಲವರು ಪಡಿತರ ಅಕ್ಕಿಯಿಂದ ವಂಚಿತರಾಗಬಹುದು. ಹೀಗಾಗಿ ಮೇ ತಿಂಗಳ ಪಡಿತರ ಅಕ್ಕಿಯನ್ನು ಜೂನ್ ಮೊದಲ ವಾರದವರೆಗೂ ನೀಡಲು ಸೂಕ್ತ ಆದೇಶ ಹೊರಡಿಸಬೇಕು” ಎಂದು ಪ್ರಭಾಕರ ಪ್ರಭು ಅವರು ಒತ್ತಾಯಿಸಿದ್ದಾರೆ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here