ವಿಶ್ವ ಪರಿಸರ ದಿನಾಚರಣೆ, ಮಕ್ಕಳಿಂದ ಸಂರಕ್ಷಣೆಯ ಪ್ರತಿಜ್ಞೆ

0

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ – ಬ್ಯಾಂಕ್ ಆಫ್ ಬರೋಡಾ ಉಪ ಪ್ರಾದೇಶಿಕ ವ್ಯವಸ್ಥಾಪಕ ಬಾಬುರಾಜ್

ಬಂಟ್ವಾಳ: “ಪರಿಸರವನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಮರಗಳ ಸಂರಕ್ಷಣೆ, ನೀರಿನ ಸಮರ್ಪಕ ಬಳಕೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣದ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯ ನೀಡಬೇಕು” ಎಂದು ಬ್ಯಾಂಕ್ ಆಫ್ ಬರೋಡಾದ ಮಂಗಳೂರು ಪ್ರಾದೇಶಿಕ ಕಚೇರಿಯ ಉಪ ಪ್ರಾದೇಶಿಕ ವ್ಯವಸ್ಥಾಪಕ ಬಾಬುರಾಜ್ ಎನ್.ಆರ್. ಹೇಳಿದರು.

ಬ್ಯಾಂಕ್ ಆಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಕರ್ನಾಟಕ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮಾಣಿ ಹಾಗೂ ಬ್ಯಾಂಕ್ ಆಫ್ ಬರೋಡಾ ಮಾಣಿ ಶಾಖೆ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಸರ ಸಂರಕ್ಷಣೆಯ ಮಹತ್ವ ವಿವರಿಸಿದ ಬಾಬುರಾಜ್, ವಿದ್ಯಾರ್ಥಿ ಸಮೂಹ ಈ ನಿಟ್ಟಿನಲ್ಲಿ ಹೆಚ್ಚು ಜಾಗೃತರಾಗುವಂತೆ ಕರೆ ನೀಡಿದರು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಸಿಇಒ ಜ್ಯೋತಿರಾಜ್, ಮಾಣಿ ಶಾಖೆಯ ವ್ಯವಸ್ಥಾಪಕ ಅಭಿಲಾಷ್ ಅಜಿತ್, ಶಾಲಾ ಕಾರ್ಯದರ್ಶಿ ಇಬ್ರಾಹಿಂ, ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಹೆಗಡೆ ಹಾಗೂ ಮಾಜಿ ಗ್ರಾ.ಪಂ ಸದಸ್ಯ ಮೆಲ್ವಿನ್ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕರ್ನಾಟಕ ಇಂಗ್ಲಿಷ್ ಮೀಡಿಯಂ ಹಾಗೂ ಕನ್ನಡ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿದರು. ಹಸಿರು ಪರಿಸರ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವ ಸಂದೇಶಗಳೊಂದಿಗೆ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here