ಅಮ್ಟಾಡಿ: ವಿದ್ಯಾನಿಕೇತನ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ, ಸಸಿ ನೆಟ್ಟು ಜಾಗೃತಿ

0

ಬಂಟ್ವಾಳ: ಅಮ್ಟಾಡಿ ಗ್ರಾಮದ ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮುಖ್ಯ ಅತಿಥಿಗಳು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ, ವೃಕ್ಷಾರೋಪಣೆಯ ಮಹತ್ವ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗಿ, ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿದರು. ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ವಕ್ತಾರರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಟ್ರಸ್ಟಿ ಕಿರಣ್ ಎಸ್. ಬಾಳಿಗಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ, ಮೊಂಟೆಸ್ಸರಿ ವಿಭಾಗದ ಮುಖ್ಯೋಪಾಧ್ಯಾಯಿನಿ ಸವಿತಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here