ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ. ಕೆ. ಬಾಲಕೃಷ್ಣ ಗಟ್ಟಿ ನಿಧನ

0

ಬಂಟ್ವಾಳ: ಕರಾವಳಿಯ ಹಿರಿಯ ಪತ್ರಕರ್ತ, ಅರ್ಥಶಾಸ್ತ್ರ ಉಪನ್ಯಾಸಕ, ನಿವೃತ್ತ ಪ್ರಾಂಶುಪಾಲ ಪ್ರೊ. ಕೆ. ಬಾಲಕೃಷ್ಣ ಗಟ್ಟಿ (83) ಇಂದು ಮುಂಬೈಯಲ್ಲಿ ನಿಧನರಾದರು.

ಕಾಸರಗೋಡು ಮೂಲದವರಾದ ಗಟ್ಟಿ ಅವರು ಬಂಟ್ವಾಳ ಎಸ್‌ವಿಎಸ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿ ಮಂಗಳೂರಿನಲ್ಲಿ ನೆಲೆಸಿದ್ದರು. ಎಪ್ಪತ್ತರ ದಶಕದಲ್ಲಿ ‘ಬುಲೆಟ್ ಮೇಸ್ಟ್ರು’ ಎಂದೇ ಪರಿಚಿತರಾಗಿದ್ದ ಅವರು ಉತ್ತಮ ವಾಗ್ಮಿಯಾಗಿದ್ದರು.

ಪತ್ರಿಕಾರಂಗಕ್ಕೆ ಕೊಡುಗೆ
ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ವರದಿಗಾರರಾಗಿ ಕಾರ್ಯನಿರ್ವಹಿಸಿದ ಗಟ್ಟಿ, ‘ನೇತ್ರಾವತಿ ವಾರ್ತೆ’ ದೈನಿಕವನ್ನು ಪ್ರಾರಂಭಿಸಿ ಅನೇಕ ಕಿರಿಯ ಪತ್ರಕರ್ತರಿಗೆ ಮಾರ್ಗದರ್ಶಕರಾಗಿದ್ದರು. ‘ಜನವಾಹಿನಿ’ ದೈನಿಕದ ಸಂಪಾದಕರಾಗಿ ಪತ್ರಿಕೆಯನ್ನು ಮುನ್ನಡೆಸಿದ ಅವರು ಸರಳ, ನಿಷ್ಠುರ ಬರವಣಿಗೆ ಮೂಲಕ ದಶಕಗಳ ಕಾಲ ಪತ್ರಿಕಾರಂಗದಲ್ಲಿ ಗುರುತಿಸಲ್ಪಟ್ಟಿದ್ದರು.

ಬಂಟ್ವಾಳ ತಾಲೂಕು ಗ್ರಾಮೀಣ ಪತ್ರಕರ್ತರ ಸಂಘವನ್ನು ಸ್ಥಾಪಿಸಿ ಸ್ಥಾಪಕಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2024ರ ನವೆಂಬರ್ 12ರಂದು ನಡೆದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.

ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here