ಕರೋಪಾಡಿಯಲ್ಲಿ ಅಕ್ರಮ ಗಣಿಗಾರಿಕೆಗೆ ಪೊಲೀಸ್ ದಾಳಿ

0

ವಿಟ್ಲ: ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.


ದಾಳಿಯ ವೇಳೆ ಮುಳಿಗದ್ದೆ ಝಕಾರಿಯಾ ಹಾಗೂ ಇತರರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರೆಂದು ಆರೋಪಿಸಲಾಗಿದ್ದು, ಪೊಲೀಸ್ ವಾಹನವನ್ನು ಕಂಡ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದೆ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವುದು ದೃಢಪಟ್ಟಿದ್ದು, ಕೃತ್ಯಕ್ಕೆ ಬಳಸಲಾಗುತ್ತಿದ್ದ ಯಂತ್ರೋಪಕರಣಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಇದೇ ಪ್ರದೇಶದಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆಯೂ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಮಣ್ಣು ಸಾಗಣೆ ಮಾಡುವ ಲಾರಿಗಳ ತೂಕ ಮಾಪನಕ್ಕಾಗಿ ನಿರ್ಮಿಸಲಾಗಿದ್ದ ವೇ-ಬ್ರಿಡ್ಜ್, ಕಟ್ಟಡ ಹಾಗೂ ಇತರೆ ಯಂತ್ರೋಪಕರಣಗಳನ್ನೂ ವಶಪಡಿಸಿಕೊಳ್ಳಲಾಗಿದೆ.


ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಝಕಾರಿಯಾ ಮುಳಿಗದ್ದೆ ಸೇರಿ ಹಲವರ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


ನಿಮ್ಮೂರಿನ ಯಾವುದೇ ಸುದ್ದಿ, ಮಾಹಿತಿಗಳಿದ್ದಲ್ಲಿ ಸಂಪರ್ಕಿಸಿ: +9190351 37252

LEAVE A REPLY

Please enter your comment!
Please enter your name here