ಬಂಟ್ವಾಳ: ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚೇತನ್ ನನ್ನು ಬಂಟ್ವಾಳ ನಗರ ಪೊಲೀಸರು ಇಂದು (ಜು.17) ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆಯುವ ವೇಳೆ ಆತ ಇಲಿಪಾಷಾಣ (ವಿಷ ಪದಾರ್ಥ) ಸೇವಿಸಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಪೊಲೀಸರು ಆತನನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆ ನೀಡುವಂತೆ ಕ್ರಮ ಕೈಗೊಂಡಿದ್ದಾರೆ.
ವಿಚಾರಣೆಯ ನಂತರವೇ ಪ್ರಕರಣದ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.








