ಬರಿಮಾರಿನಲ್ಲಿ ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, : ಓರ್ವ ವಿದ್ಯಾರ್ಥಿನಿ ಮೃತ್ಯು

0

ಬಂಟ್ವಾಳ: ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಕಲ್ಲಡ್ಕದ ಖಾಸಗಿ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ನಡೆದಿದೆ.


ಇಲ್ಲಿನ ಶ್ರೀ ಕಾನಲ್ತಾಯ ದೈವಸ್ಥಾನದ ಬದಿಯ ಮರವೊಂದು ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬಿದ್ದಿದ್ದು ಸುಮಾರು 6 ವರ್ಷ ಪ್ರಾಯದ ಚಿರಣ್ವಿ ಎಂಬ ಶಾಲಾ ವಿದ್ಯಾರ್ಥಿನಿ ಮೃತ ಪಟ್ಟು, 4 ಜನ ಮಕ್ಕಳಿಗೆ ಗಾಯಾವಾಗಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.


ಮಕ್ಕಳನ್ನು ಸ್ಥಳೀಯರ ನೆರವಿನಿಂದ ತಕ್ಷಣ ಪುತ್ತೂರು ಹಾಗೂ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್‌ನೊಳಗಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದರು. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.


ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಭಾರಿ ಮಳೆಯಿದ್ದ ಕಾರಣ ಮರ ಉರುಳಿ ಬಿದ್ದಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here